ADVERTISEMENT

ಚಂದ್ರಗುತ್ತಿಯಲ್ಲಿ ಜೂನ್ 1ಕ್ಕೆ ವಿಶ್ವಶಾಂತಿ ಮಹಾಯಾಗ

​ಪ್ರಜಾವಾಣಿ ವಾರ್ತೆ
Published 24 ಮೇ 2025, 13:38 IST
Last Updated 24 ಮೇ 2025, 13:38 IST
ಎಸ್.ಡಿ.ನಾಯ್ಕ್ ಹುಲ್ತಿಕೊಪ್ಪ
ಎಸ್.ಡಿ.ನಾಯ್ಕ್ ಹುಲ್ತಿಕೊಪ್ಪ   

ಸೊರಬ: ಲೋಕ ಕಲ್ಯಾಣಕ್ಕಾಗಿ ತಾಲ್ಲೂಕಿನ ಚಂದ್ರಗುತ್ತಿಯ ರೇಣುಕಾಂಬಾ ದೇವಿ ಸನ್ನಿಧಿಯಲ್ಲಿ ಜೂನ್ 1ರಂದು ಈಡಿಗ, ಬಿಲ್ಲವ, ನಾಮಧಾರಿ, ಧೀವರು ಸೇರಿ 26 ಉಪ ಪಂಗಡಗಳ ಸಮುದಾಯದ ನೇತೃತ್ವದಲ್ಲಿ ವಿಶ್ವಶಾಂತಿ ಮಹಾಯಾಗ ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಡಿ.ನಾಯ್ಕ್ ಹುಲ್ತಿಕೊಪ್ಪ ಹೇಳಿದರು.

ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸೈದಪ್ಪ ಕೆ.ಗುತ್ತೇದಾರ್ ಅಧ್ಯಕ್ಷತೆ ವಹಿಸಲಿದ್ದು, ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ’ ಎಂದು ಪಟ್ಟಣದಲ್ಲಿ ಸುದ್ದಿಗೋಷ್ಠಿ‌ ತಿಳಿಸಿದರು.

ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಅನುವಂಶಿಕ ಧರ್ಮದರ್ಶಿ ರಾಮಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಭೀಮಣ್ಣ ನಾಯ್ಕ, ವಿ.ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ್, ಮಾಜಿ ಸಚಿವರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಚಂದ್ರಗುತ್ತಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ADVERTISEMENT

ಬಿಎಸ್‍ಎನ್‍ಡಿಪಿ ತಾಲ್ಲೂಕು ಘಟಕದ ಅಧ್ಯಕ್ಷ ರಾಜು ಹಿರಿಯಾವಲಿ, ಬಿಎಸ್‍ಎನ್‍ಡಿಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಲೋಕೇಶ್, ತಾಲ್ಲೂಕು ಅಧ್ಯಕ್ಷೆ ಸುಮಾ ಇಂಡುವಳ್ಳಿ, ಶ್ಯಾಮಲಾ, ರೇಖಾ, ಅನುಸೂಯಾ, ಶಶಿಕಲಾ, ಸುಮಂಗಲಾ, ತ್ಯಾಗರಾಜ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.