ADVERTISEMENT

ಪ್ರಜಾಪ್ರಭುತ್ವದ ಸುಭದ್ರತೆ ಮತದಾನವೇ ಅಸ್ತ್ರ

ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜೆ.ಎಂ.ಎಂ.ಮಹಾಸ್ವಾಮೀಜಿ ಅಭಿಮತ

​ಪ್ರಜಾವಾಣಿ ವಾರ್ತೆ
Published 25 ಜನವರಿ 2020, 13:05 IST
Last Updated 25 ಜನವರಿ 2020, 13:05 IST
ಶಿವಮೊಗ್ಗ ಅಂಬೇಡ್ಕರ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜೆ.ಎಂ.ಎಂ.ಮಹಾಸ್ವಾಮೀಜಿ ಮಾತನಾಡಿದರು.
ಶಿವಮೊಗ್ಗ ಅಂಬೇಡ್ಕರ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜೆ.ಎಂ.ಎಂ.ಮಹಾಸ್ವಾಮೀಜಿ ಮಾತನಾಡಿದರು.   

ಶಿವಮೊಗ್ಗ: ಜಗತ್ತಿನಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಯೇ ಪ್ರಭು. ಪ್ರಜಾಪ್ರಭುತ್ವದ ಸುಭದ್ರತೆಗೆ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಮತ್ತುಸೆಷೆನ್ಸ್ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜೆ.ಎಂ.ಎಂ.ಮಹಾಸ್ವಾಮೀಜಿಹೇಳಿದರು.

ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ,ನಗರ ಪಾಲಿಕೆ ಸಹಯೋಗದಲ್ಲಿ ಅಂಬೇಡ್ಕರ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಭವಿಷ್ಯ ನಿರ್ಣಯ ಮತದಾರರ ಕೈಯಲ್ಲಿದೆ. ಕೇವಲ ಒಂದು ಪ್ರಾಮಾಣಿಕ ಮತ ಚಲಾವಣಿಯಿಂದ ಪ್ರಜಾಪ್ರಭುತ್ವದ ಬಲಪಡಿಸಲು ಸಾಧ್ಯವಿದೆ.ಪ್ರಜಾಪ್ರಭುತ್ವ ಗಿಡವಾಗಿದ್ದರೆ, ಮತದಾರ ನೀರು ಇದ್ದ ಹಾಗೆ.ಪ್ರಜಾಪ್ರಭುತ್ವ ಹೆಮ್ಮರವಾಗಿ ಬೆಳೆಯಲು ಮತದಾರರು ಮತ ಎಂಬ ನೀರು ಹಾಕಬೇಕು. ಯುವ ಜನಾಂಗ ಮತದಾನದ ಪ್ರಕ್ರಿಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ತಾವು ಗೆಲ್ಲಿಸುವ ಅಭ್ಯರ್ಥಿ ರಾಷ್ಟ್ರಮಟ್ಟದಲ್ಲಿ ನಮ್ಮನ್ನು ಪ್ರತಿನಿಧಿಸುತ್ತಾರೆ ಎಂಬ ಅರಿವಿರಬೇಕು ಎಂದು ಸಲಹೆ ನೀಡಿದರು.

ADVERTISEMENT

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿ, ಚುನಾವಣೆಯಲ್ಲಿ ಒಂದೊಂದು ಮತ ಸಹ ಅತ್ಯಮೂಲ್ಯ. ಒಂದು ಮತದಿಂದ ಗೆಲವು ಸೋಲು ಕಂಡಿರುವ ಉದಾಹರಣೆಗಳಿವೆ. ಸಂವಿಧಾನ ದತ್ತವಾಗಿ ಸಿಕ್ಕಿರುವ ಮತದಾನ ಹಕ್ಕು ಅರಿತು ಮತದಾರರು ಜವಾಬ್ದಾರಿಯಿಂದ ಮತದಾನ ಮಾಡಬೇಕುಎಂದರು.

ಪ್ರಜಾಪ್ರಭುತ್ವದ ಸುಭದ್ರತೆಗೆ 18 ವರ್ಷ ತುಂಬಿದ ಎಲ್ಲರೂ ತಮ್ಮ ಮಾತದಾನಮಾಡಬೇಕು. ಬೇರೆ ದೇಶಗಳಲ್ಲಿ ಕೆಲವರಿಗೆ ಮಾತ್ರ ಮತದಾನ ಮಾಡುವ ಹಕ್ಕು ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಮತದಾರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ನೂತವಾಗಿ ಮತದಾರ ಪಟ್ಟಿಗೆ ಸೇರಿದ ಮತದಾರರಿಗೆ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಿಸಲಾಯಿತು. ಮತದಾನದ ಮಹತ್ವ ಕುರಿತು ಶಾಲಾ, ಕಾಲೇಜುಗಳಲ್ಲಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.

ಜಿಲ್ಲಾ ಸಿವಿಲ್ ನ್ಯಾಯಾಧೀಶರಾದ ಕೆ.ಎಸ್.ಸರಸ್ವತಿ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಜೆ.ಅನುರಾಧ, ಉಪ ವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ವೀರಭದ್ರಪ್ಪ, ನಗರ ಯೋಜನಾ ನಿರ್ದೇಶಕ ಡಾ.ನಾಗೇಂದ್ರ ಎಫ್. ಹೊನ್ನಳ್ಳಿ ಉಪಸ್ಥಿತರಿದ್ದರು .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.