ADVERTISEMENT

ಬೆಂಗಳೂರಿಗೆ ನೀರು: ಸ್ವಾಮೀಜಿಗಳ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 23 ಜೂನ್ 2019, 20:20 IST
Last Updated 23 ಜೂನ್ 2019, 20:20 IST
ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ
ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ   

ಸಾಗರ: ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಹರಿಸಬೇಕು ಎಂಬ ರಾಜ್ಯ ಸರ್ಕಾರದ ಪ್ರಸ್ತಾವಿತ ಯೋಜನೆಗೆ ಆನಂದಪುರಂನ ಮುರುಘಾಮಠದ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಭಾನುವಾರ ಇಲ್ಲಿ ನಡೆದ ಎಂ.ಕೆ.ರೇಣುಕಪ್ಪ ಗೌಡ ಪ್ರತಿಷ್ಠಾನದ ಉದ್ಘಾಟನೆ ಸಮಾರಂಭದಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಸಾಹಿತಿ ನಾ. ಡಿಸೋಜ ಅವರ ಅಧ್ಯಕ್ಷತೆಯಲ್ಲಿ ಯೋಜನೆಯನ್ನು ವಿರೋಧಿಸಲು ರೂಪುಗೊಂಡಿರುವ ಸಮಿತಿಯ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ಘೋಷಿಸಿದರು.

ರಿಪ್ಪನ್‌ಪೇಟೆ ವರದಿ: ಬೆಂಗಳೂರಿಗೆ ಲಿಂಗನಮಕ್ಕಿಯಿಂದ ಜಲಾಶಯದ ನೀರನ್ನು ಪೂರೈಕೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಇಂತಹ ಅವೈಜ್ಞಾನಿಕ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ಹೊಂಬುಜ ಮಠದ ಪೀಠಾಧಿಕಾರಿ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.