ADVERTISEMENT

ತುಂಗಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2022, 4:54 IST
Last Updated 27 ಏಪ್ರಿಲ್ 2022, 4:54 IST
ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಹಿರಿಯ ವ್ಯವಸ್ಥಾಪಕ ವಿ.ಎಂ. ಉನ್ನಿಕೃಷ್ಣನ್ ಅವರು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಂದ ‘ಯಂಗ್ ಅಚೀವರ್ಸ್ ಅವಾರ್ಡ್’ ಸ್ವೀಕರಿಸಿದರು
ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಹಿರಿಯ ವ್ಯವಸ್ಥಾಪಕ ವಿ.ಎಂ. ಉನ್ನಿಕೃಷ್ಣನ್ ಅವರು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಂದ ‘ಯಂಗ್ ಅಚೀವರ್ಸ್ ಅವಾರ್ಡ್’ ಸ್ವೀಕರಿಸಿದರು   

ಶಿವಮೊಗ್ಗ: ತುಂಗಾಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವ ಕಾರಣ ತುಂಗಾ ಜಲಾಶಯದಿಂದ ನದಿಗೆ ನೀರನ್ನು ಬಿಡುವ ಸಂಭವವಿದ್ದು, ತುಂಗಾ ನದಿ ಪಾತ್ರದ ಜನರು ಮುಂಜಾಗ್ರತೆ ವಹಿಸಬೇಕು ಎಂದು ತುಂಗಾ ಮೇಲ್ದಂಡೆ ಯೋಜನೆಯ ಎಂಜಿನಿಯರ್ ತಿಳಿಸಿದ್ದಾರೆ.

ಮುಂಗಾರು ಪ್ರಾರಂಭವಾಗಿರುವುದರಿಂದ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಾಧ್ಯತೆ ಇದೆ.ತುಂಗಾ ನದಿಯ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಜನರು ‌‌ಹಾಗೂ ತಗ್ಗು ಪ್ರದೇಶಗಳ ಜನರು ಆ ವ್ಯಾಪ್ತಿಯಲ್ಲಿ ಕೃಷಿ ಸೇರಿ ಯಾವುದೇ ಚಟುವಟಿಕೆ ಕೈಗೊಳ್ಳಬಾರದು. ಜಾನುವಾರು ಮೇಯಲು ಬಿಡಬಾರದು. ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT