
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಚಿತ್ರ
ಶಿವಮೊಗ್ಗ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ 2025–26ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಫೆ. 15ರಂದು ಎ.ಎನ್.ಕೆ.ರಸ್ತೆ, ಜಿಲ್ಲಾ ಪಂಚಾಯಿತಿ ಹಿಂಭಾಗ, ಗಾಂಧಿನಗರ, ಶಾಂತಿನಗರದ ಯಲ್ಲಮ್ಮ ದೇವಸ್ಥಾನದ ಹತ್ತಿರ, ಪುರಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ, ಬೊಮ್ಮನಕಟ್ಟೆ ಅಪೂರ್ವ ಕಾಲೇಜಿನ ಹತ್ತಿರ ಹಾಗೂ ಕಾಶೀಪುರ ಮುಖ್ಯರಸ್ತೆ, ಕೆನರಾ ಬ್ಯಾಂಕ್ ಹತ್ತಿರ ಇಲ್ಲಿ ವಿಶೇಷ ಕರ ವಸೂಲಾತಿ ಕೌಂಟರ್ ತೆರೆಯಲಾಗಿದೆ.
ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರ ವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.