ADVERTISEMENT

‘ಹೃದ್ರೋಗ: ಮುಂಜಾಗ್ರತೆ ಅಗತ್ಯ’

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2021, 3:44 IST
Last Updated 30 ಸೆಪ್ಟೆಂಬರ್ 2021, 3:44 IST
ಸಾಗರದಲ್ಲಿ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಶಾಸಕ ಎಚ್. ಹಾಲಪ್ಪ ಹರತಾಳು ಹಸಿರು ನಿಶಾನೆ ತೋರಿದರು.
ಸಾಗರದಲ್ಲಿ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಶಾಸಕ ಎಚ್. ಹಾಲಪ್ಪ ಹರತಾಳು ಹಸಿರು ನಿಶಾನೆ ತೋರಿದರು.   

ಸಾಗರ: ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯಲು ಮುಂಜಾಗ್ರತೆ ವಹಿಸುವುದು ಅಗತ್ಯ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.

ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನೆಹರೂ ಯುವ ಕೇಂದ್ರ, ಆರೋಗ್ಯ ಇಲಾಖೆ, ಎನ್‌ಸಿಸಿ, ಎನ್‌ಸಿಡಿ ಹಾಗೂ ಉದಯೋನ್ಮುಖ ಯುವಕರ ಸಂಘದ ಆಶ್ರಯದಲ್ಲಿ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಬುಧವಾರ ಏರ್ಪಡಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಯುವಜನರಲ್ಲೂ ಹೃದಯ ಸಂಬಂಧಿ ಕಾಯಿಲೆಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ನಿಯಮಿತ ಅವಧಿಯವರೆಗೆ ಪ್ರತಿದಿನವೂ ವಾಕಿಂಗ್ ಮಾಡುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆಹಾರ ಸೇವನೆಯ ವಿಷಯದಲ್ಲೂ ಹೃದಯ ರೋಗಿಗಳು ವೈದ್ಯರು ನೀಡುವ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ADVERTISEMENT

ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯ ಡಾ.ಕಾವ್ಯ ವಿಕ್ರಮ್, ‘40 ವರ್ಷ ದಾಟಿದ ನಂತರ ರಕ್ತದೊತ್ತಡ, ಮಧುಮೇಹ ಕಾಯಿಲೆ ಕಾಣಿಸಿಕೊಳ್ಳುವುದು ಹೆಚ್ಚಾಗುತ್ತಿದೆ. ಈ ವಯೋಮಾನದವರು ಆಗಾಗ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಸ್ವಯಂ ಜಾಗೃತಿ ವಹಿಸಬೇಕು’ ಎಂದು ಕಿವಿಮಾತು ಹೇಳಿದರು.

ಆರೋಗ್ಯ ಇಲಾಖೆ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷ ಮ.ಸ. ನಂಜುಂಡಸ್ವಾಮಿ, ತಾಲ್ಲೂಕು ಅಧ್ಯಕ್ಷ ವೈ. ಮೋಹನ್, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಡಿ. ತುಕಾರಾಮ್, ಸದಸ್ಯರಾದ ಟಿ.ಡಿ. ಮೇಘರಾಜ್, ಕೆ.ಆರ್. ಗಣೇಶ್ ಪ್ರಸಾದ್, ಮೈತ್ರಿ ಪಾಟೀಲ್, ಸಂತೋಷ್ ಆರ್. ಶೇಟ್, ನೆಹರೂ ಯುವ ಕೇಂದ್ರದ ಗಿರೀಶ್, ಎನ್‌ಸಿಸಿ ಅಧಿಕಾರಿ ನೂತನ್, ನವೀನ್, ವಿನೋದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.