ರಿಪ್ಪನ್‌ಪೇಟೆ: ಮೂಗುಡ್ತಿ ವನ್ಯಜೀವಿ ವಲಯ ವ್ಯಾಪ್ತಿಯ ಕುಮದ್ವತಿ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಸಂಚು ಹೂಡಿದ್ದ ಐವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸುವಲ್ಲಿ ಅರಣ್ಯಾಧಿಕಾರಿ ಪವನ್ ಕುಮಾರ್ ಎನ್. ನೇತೃತ್ವದ ತಂಡ ಯಶಸ್ವಿಯಾಗಿದೆ.
ಬಂಧಿತ ಆರೋಪಿಗಳು ಬಟ್ಟೆ ಮಲ್ಲಪ್ಪ ಗ್ರಾಮದ ವಿಶ್ವನಾಥ, ಬಳಸಗೋಡು ಗ್ರಾಮದ ಚನ್ನವೀರಮೂರ್ತಿ ಹಾಗೂ ಹಾಲೇಶ ಎಂದು ಗುರುತಿಸಲಾಗಿದೆ. ಗಾಜಿನಗೋಡು ಮೂಲದ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಮಂಗಳವಾರ ಮುಂಜಾನೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಅನುಮಾನಾಸ್ಪದವಾಗಿ ಕಾಡಿನಲ್ಲಿ ತಿರುಗಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ತಕ್ಷಣವೇ ಕಾರ್ಯಾಚರಣೆ ನಡೆಸಿದ ಆರ್.ಎಫ್.ಒ ತಂಡ ಕೃತ್ಯಕ್ಕೆ ಬಳಸಿದ ಆಲ್ಟೋ ಕಾರು ಸಹಿತ ಮೂವರು ಆರೋಪಿಗಳನ್ನು ಬಂಧಿಸಿ ನಾಡ ಬಂದೂಕು, ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಡಿಆರ್‌ಎಫ್‌ಓ ಪುಟ್ಟಣ್ಣ ಕೆ, ಫಾರೆಸ್ಟ್ ಗಾರ್ಡ್ ಸಚಿನ್ ಕೆ.ಟಿ, ವಾಚರ್ ಸವಿನ್ ಮತ್ತು ಸಿಬ್ಬಂದಿ ವರ್ಗ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.