ADVERTISEMENT

ಮಗನಿಂದ ಸ್ಕೂಟರ್ ಚಾಲನೆ: ಅಮ್ಮನಿಗೆ ₹30 ಸಾವಿರ ದಂಡ!

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2024, 3:59 IST
Last Updated 8 ಫೆಬ್ರುವರಿ 2024, 3:59 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ಪ್ರಜಾವಾಣಿ ಚಿತ್ರ

ಶಿವಮೊಗ್ಗ: ಚಾಲನಾ ಪರವಾನಗಿ (ಲೈಸೆನ್ಸ್) ಇಲ್ಲದಿದ್ದರೂ ಅಪ್ರಾಪ್ತ ವಯಸ್ಸಿನ ಮಗನಿಗೆ ಚಾಲನೆ ಮಾಡಲು ಸ್ಕೂಟರ್ ಕೊಟ್ಟಿದ್ದ ತಾಯಿಗೆ ಇಲ್ಲಿನ 3ನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ ₹30 ಸಾವಿರ ದಂಡ ವಿಧಿಸಿದೆ.

ADVERTISEMENT

ಕಳೆದ ಜನವರಿ 30ರಂದು ಪೂರ್ವ ಸಂಚಾರ ಠಾಣೆಯ ಪಿಎಸ್ಐ ನವೀನ್ ಕುಮಾರ್ ಮಠಪತಿ ನಗರದ ಎಸ್ ಪಿಎಂ ರಸ್ತೆಯ ಕೋಟೆ ಆಂಜನೇಯನ ದೇವಾಲಯದ ಹತ್ತಿರ ವಾಹನ ತಪಾಸಣೆ ಮಾಡುವಾಗ 17 ವರ್ಷದ ಬಾಲಕ ವಾಹನ ಚಾಲನಾ ಪರವಾನಿಗೆ ಇಲ್ಲದೆ ಸ್ಕೂಟರ್ ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದನು.

ವಾಹನದ ಮಾಲೀಕರಾದ ಬಾಲಕನ ತಾಯಿಯ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿ ಸಲ್ಲಿಸಿದ್ದರು. ಆರೋಪ ಪಟ್ಟಿ ಪರಿಶೀಲಿಸಿದ ನ್ಯಾಯಾಧೀಶರು ದಂಡ ವಿಧಿಸಿ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.