ADVERTISEMENT

ವಿಶ್ವ ಹಾಲು ದಿನ: ಜೂ.1ರಂದು ನಂದಿನಿ 18 ಉತ್ಪನ್ನಗಳ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 31 ಮೇ 2025, 14:50 IST
Last Updated 31 ಮೇ 2025, 14:50 IST
ಶಿಮುಲ್
ಶಿಮುಲ್   

ಶಿವಮೊಗ್ಗ: ‘ವಿಶ್ವ ಹಾಲು ದಿನಾಚರಣೆ’ ಪ್ರಯುಕ್ತ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ಹಾಗೂ ಶಿಮುಲ್ ವತಿಯಿಂದ ಜೂ. 1ರಂದು 18 ವಿವಿಧ ಸ್ವಾದದ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ.

ಒಕ್ಕೂಟವು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಕಾರ್ಯ ವ್ಯಾಪ್ತಿ ಹೊಂದಿದೆ. ಕಾರ್ಯವ್ಯಾಪ್ತಿಯ ಜಿಲ್ಲೆಗಳ 1325 ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿನಿತ್ಯ ಸರಾಸರಿ 8 ಲಕ್ಷ ಕೆ.ಜಿ ಹಾಲು ಸಂಗ್ರಹಿಸಲಾಗುತ್ತಿದೆ. ಸದರಿ ಹಾಲನ್ನು ಸಂಸ್ಕರಿಸಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ.

ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ಸಿಹಿ ಹಾಗೂ ಖಾರಾ ಉತ್ಪನ್ನಗಳು ಅಲ್ಲದೇ ಬ್ರೇಡ್, ಬನ್, ಐಸ್ ಕ್ರೀಂ ಸೇರಿದಂತೆ ಈಗಾಗಲೇ 150ಕ್ಕೂ ಹೆಚ್ಚು ವಿವಿಧ ಉತ್ಪನ್ನಗಳನ್ನು ಕೆ.ಎಂ.ಎಫ್ ಹಾಗೂ ಹಾಲು ಒಕ್ಕೂಟಗಳಿಂದ ಮಾರಾಟ ಮಾಡಲಾಗುತ್ತಿದೆ.

ADVERTISEMENT

ಈಗಾಗಲೇ ಶಿಮುಲ್ ವತಿಯಿಂದ 100 ಗ್ರಾಂ ಪ್ಯಾಕ್‌ನಲ್ಲಿ ಖೋವಾ ಕಡಲೇ ಮಿಠಾಯಿ ಮಾರಾಟ ಮಾಡಲಾಗುತ್ತಿದೆ. ಅದರೊಂದಿಗೆ 12 ಗ್ರಾಂ ಹಾಗೂ 25 ಗ್ರಾಂ ಪ್ಯಾಕ್‌ಗಳಲ್ಲಿ ಸಹ ಖೋವಾ ಕಡಲೆ ಮಿಠಾಯಿ ಉತ್ಪಾದಿಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಗ್ರಾಹಕರು ನಂದಿನಿ ಉತ್ಪನ್ನಗಳನ್ನು ಬಳಸುವ ಮೂಲಕ ರೈತರ ಸಹಕಾರಿ ಸಂಸ್ಥೆ ಬೆಳವಣಿಗೆಗೆ ಸಹಕರಿಸುವಂತೆ ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. 

ನಂದಿನಿ ಕೇಕ್ ಹಾಗೂ ಮಫಿನ್‌ಗಳ ದರ

ಸ್ಪಾಂಜಿ ವೆನಿಲ್ಲಾ ಕೇಕ್ 25 ಗ್ರಾಂಗೆ ₹ 10 ಫ್ರೂಟಿ ಸ್ಲೈಸ್ ಕೇಕ್ 30 ಗ್ರಾಂಗೆ ₹ 15 ಚಾಕೋ ಕಿತ್ತಲೆ ಸ್ಲೈಸ್ ಕೇಕ್ ವೆನಿಲ್ಲಾ ಸ್ಲೈಸ್ ಕೇಕ್ ಅನಾನಸ್ ಸ್ಲೈಸ್ ಕೇಕ್ 50 ಗ್ರಾಂಗೆ ₹15ರಿಂದ ₹20 ವೆನಿಲ್ಲಾ ಮಫಿನ್ ಚಾಕಲೇಟ್ ಮಫಿನ್ ಅನಾನಸ್ ಮಫಿನ್ ಸ್ಟ್ರಾಬೆರಿ ಮಫಿನ್ ಮಾವಾ ಮಫಿನ್ 150 ಗ್ರಾಂಗೆ ₹50 ಪ್ಲಮ್ ಕೇಕ್ ಚಾಕೋ ವೆನಿಲ್ಲಾ ಕೇಕ್ ಫ್ರೂಟ್ ಕೇಕ್ ವೆನಿಲ್ಲಾ ಕೇಕ್ ಚಾಕೊಲೇಟ್ ಕೇಕ್ ವಾಲ್ನಟ್ ಬನಾನಾ ಕೇಕ್ ಚಾಕಲೆಟ್ ಬೆಲ್ಲದ ಕೇಕ್ ಹಾಗೂ ಕೊಬ್ಬರಿ ಬೆಲ್ಲದ ಕೇಕ್ 200 ಗ್ರಾಂಗೆ ₹110 ದರ ನಿಗದಿಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.