ADVERTISEMENT

ಗಂಧದ ಗುಡಿ ಚಿತ್ರ ವೀಕ್ಷಿಸಿದ ಯಡಿಯೂರಪ್ಪ

ಸಂಸದ ಬಿ.ವೈ.ರಾಘವೇಂದ್ರ ದಂಪತಿ, ಬಿಜೆಪಿ ಮುಖಂಡರು ಸಾಥ್

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2022, 8:25 IST
Last Updated 4 ನವೆಂಬರ್ 2022, 8:25 IST
ಶಿವಮೊಗ್ಗದಲ್ಲಿ ಗುರುವಾರ ಪುನೀತ್‌ ರಾಜಕುಮಾರ್ ಅಭಿನಯದ ಗಂಧದ ಗುಡಿ ಚಿತ್ರವನ್ನು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವೀಕ್ಷಣೆ ಮಾಡಿದರು
ಶಿವಮೊಗ್ಗದಲ್ಲಿ ಗುರುವಾರ ಪುನೀತ್‌ ರಾಜಕುಮಾರ್ ಅಭಿನಯದ ಗಂಧದ ಗುಡಿ ಚಿತ್ರವನ್ನು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವೀಕ್ಷಣೆ ಮಾಡಿದರು   

ಶಿವಮೊಗ್ಗ: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಗುರುವಾರ ಶಿವಮೊಗ್ಗದ ಶಿವಪ್ಪ ನಾಯಕ ಮಾಲ್‌ನ ಭಾರತ್‌ ಮಲ್ಟಿಫ್ಲೆಕ್ಸ್‌ನಲ್ಲಿ ಪುನೀತ್‌ ರಾಜಕುಮಾರ್ ಅಭಿನಯದ ಗಂಧದ ಗುಡಿ ಚಿತ್ರವನ್ನು ವೀಕ್ಷಿಸಿದರು.

ಈ ವೇಳೆ ಅವರಿಗೆ ಪುತ್ರ, ಸಂಸದ ಬಿ.ವೈ.ರಾಘವೇಂದ್ರ ಹಾಗೂ ಅವರ ಪತ್ನಿ ತೇಜಸ್ವಿನಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಸಾಥ್ ನೀಡಿದರು.

ಯಡಿಯೂರಪ್ಪ ಅವರು ಮಾಲ್‌ಗೆ ಬರುತ್ತಿದ್ದಂತೆಯೇ ಎದುರು ಸಿಕ್ಕ ಪುಟ್ಟ ಮಗುವಿನ ಕೈಹಿಡಿದು ಶೇಕ್‌ಹ್ಯಾಂಡ್ ಮಾಡಿದರು. ಈ ವೇಳೆ ಕೆಲವರು ಯಡಿಯೂರಪ್ಪ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು. ಸೆಲ್ಫಿ ತೆಗೆದುಕೊಂಡ ಎಲ್ಲರಿಗೂ ಯಡಿಯೂರಪ್ಪ ಸಹಕರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.