ಶಿಕಾರಿಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಪಟ್ಟಣದಲ್ಲಿ ವಾಣಿಜ್ಯ ಮಳಿಗೆಗಳ ಮಾಲೀಕರು ಸ್ವಯಂ ಪ್ರೇರಿತರಾಗಿ ಅಂಗಡಿ ಬಂದ್ ಮಾಡುವ ಮೂಲಕ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸುತ್ತಿದ್ದಂತೆ ಪಟ್ಟಣದಲ್ಲಿ ಯಡಿಯೂರಪ್ಪ ಅಭಿಮಾನಿಗಳು ಹಾಗೂ ವಾಣಿಜ್ಯ ಮಳಿಗೆಗಳ ಮಾಲೀಕರು ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ತಮ್ಮ ನೋವನ್ನು ವ್ಯಕ್ತಪಡಿಸಿದರು.
ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪ ಪರ ಜೈಕಾರ ಕೂಗುತ್ತಾ ಪ್ರಮುಖ ರಸ್ತೆಗಳಲ್ಲಿ ಹೆಜ್ಜೆ ಹಾಕಿದರು. ಮಾಳೇರಕೇರಿಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸದಲ್ಲಿ ನಿರವ ಮೌನ ಆವರಿಸಿತ್ತು.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.