ಶಿವಮೊಗ್ಗ: ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರ ಹಿರಿಯ ಪುತ್ರ ಸುಭಾಷ್ ಅವರ ವಿವಾಹವು ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನದ ದೀಪಾಲಿ ಮತ್ತು ಲಿಂಗರಾಜ್ ಬಸವರಾಜ್ ಅಪ್ಪ ಅವರ ಪುತ್ರಿ ಶ್ರವಣಾ ಅವರೊಂದಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ವಿವಾಹ ಜರುಗಿತು.
ಉಪರಾಷ್ಟ್ರಪತಿ ಜಗದೀಶ್ ಧನಕರ್, ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ, ಆಂಧ್ರಪ್ರದೇಶ ರಾಜ್ಯಪಾಲ ಅಬ್ದುಲ್ ನಜೀರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸದಾನಂದ ಗೌಡ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ಚಲನಚಿತ್ರ ನಟರಾದ ಯಶ್, ಸಾಯಿಕುಮಾರ್, ಡಾಲಿ ಧನಂಜಯ, ಶರಣ್, ಸಾಧುಕೋಕಿಲ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.