ADVERTISEMENT

ಮೋದಿ, ಯೋಗಿ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 3:36 IST
Last Updated 5 ಅಕ್ಟೋಬರ್ 2021, 3:36 IST
ಶಿವಮೊಗ್ಗದಲ್ಲಿ ಸೋಮವಾರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸಿದರು.
ಶಿವಮೊಗ್ಗದಲ್ಲಿ ಸೋಮವಾರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸಿದರು.   

ಶಿವಮೊಗ್ಗ: ಉತ್ತರ ಪ್ರದೇಶದಲ್ಲಿ ರೈತರ ಹತ್ಯೆ ಹಾಗೂ ಹತ್ಯೆಯಾದ ರೈತ ಕುಟುಂಬದ ಸದಸ್ಯರ ಭೇಟಿಗೆ ಹೋದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿದ ಕ್ರಮ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸಿದರು.

ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿ ತಂದಿದೆ. ರೈತರನ್ನು ದಮನ ಮಾಡಲು ಹೊರಟಿದೆ. 10 ತಿಂಗಳಿಂದ ರೈತರು ದೆಹಲಿಯ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಕುರುಡುತನ ತೋರಿದೆ. ಹೋರಾಟ ಹತ್ತಿಕ್ಕಲು ಪ್ರಕರಣ ದಾಖಲಿಸುತ್ತಿದೆ. ಹತ್ಯೆ ಮಾಡುತ್ತಿದೆ ಎಂದು ದೂರಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ಲೋಕೇಶ್, ದಕ್ಷಿಣ ಬ್ಲಾಕ್ ಅಧ್ಯಕ್ಷ ಎಸ್. ಕುಮರೇಶ್, ಹೊಳೆಹೊನ್ನೂರು ಬ್ಲಾಕ್ ಅಧ್ಯಕ್ಷ ಇಟಿ ನಿತಿನ್, ಶಶಿ ಕುಮಾರ್ ಸಿರಿಗೆರೆ ಆರ್. ಕಿರಣ್, ಪುಷ್ಪಕ್ ಕುಮಾರ್, ವೆಂಕಟೇಶ್ ಕಲ್ಲೂರ್, ಪಿ.ಅರ್ಜುನ್, ನಿಹಲ್ ಸಿಂಗ್, ವಿಶಾಲ್ ಗುಜಾರ್, ಶ್ರೀನಿವಾಸ್, ರಾಹುಲ್ ಮಲ್ಲಿ ಜಟ್‌ಪಟ್ ನಗರ, ರಾಹುಲ್ ಜೈನ್, ಚಿನ್ಮಯ್ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.