ಚಿಕ್ಕಬಳ್ಳಾಪುರ: ನಗರದಲ್ಲಿ ಕಾರ್ಯಾಚರಣೆಗಿಳಿದಿರುವ ಪೊಲೀಸರು, ನಗರಸಭೆ ಮಾರ್ಷಲ್ ಗಳು ಚಿನ್ನ ಮತ್ತು ಬೆಳ್ಳಿ ಅಂಗಡಿ, ಬಟ್ಟೆ, ಟೀ ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಇದು ಅಂಗಡಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ.
ಬಿ ಬಿ ರಸ್ತೆಯಲ್ಲಿ ಪೊಲೀಸರು ಕಾರ್ಯಾಚರಣೆಗೆ ಇಳಿದರೆ, ಗಂಗಮ್ಮನ ಗುಡಿ ರಸ್ತೆ, ಬಜಾರ್ ರಸ್ತೆಯಲ್ಲಿ ನಗರಸಭೆ ಸಿಬ್ಬಂದಿ ಅಂಗಡಿಗಳ ಬಾಗಿಲು ಹಾಕಿಸಿದರು. ಹೀಗೆ, ಏಕಾಏಕಿ ಬಾಗಿಲು ಮುಚ್ಚಿಸಲು ಮುಂದಾಗುತ್ತಿದ್ದಂತೆ ವ್ಯಾಪಾರಿಗಳು ಪೊಲೀಸರು ಮತ್ತು ನಗರಸಭೆ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದರು.
ದಿನಸಿ ಅಂಗಡಿ, ಮೆಡಿಕಲ್ ಸ್ಟೋರ್, ಸಲೂನ್‌ಗಳು, ಹಾಲಿನ ಬೂತ್‌ಗಳನ್ನು ಬಂದ್ ಮಾಡಿಸುತ್ತಿಲ್ಲ. ಆಭರಣ ಮಳಿಗೆಗಳು, ಬಟ್ಟೆ ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದೇವೆ ಎಂದು ಕಾರ್ಯಾಚರಣೆ ನಡೆಸುತ್ತಿರುವ ನಗರಸಭೆ ಸಿಬ್ಬಂದಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.