ಬಸ್ ನಿಲ್ದಾಣಗಳಲ್ಲಿ ಇಂದಿನಿಂದ ಮಳಿಗೆಗಳು ಬಂದ್
ಬೆಂಗಳೂರು: ನಗರದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿರುವ ಹೋಟೆಲ್‍ಗಳು ಹಾಗೂ ಮಳಿಗೆಗಳನ್ನು ಜು.9ರಿಂದ ತಾತ್ಕಾಲಿಕವಾಗಿ ಬಂದ್ ಮಾಡಲು ಹೋಟೆಲ್ ಮಾಲೀಕರು ಮತ್ತು ಮಳಿಗೆದಾರರು ನಿರ್ಧರಿಸಿದ್ದಾರೆ.
ನಗರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವುದರಿಂದ ಬಸ್ ನಿಲ್ದಾಣಗಳು ಪ್ರಯಾಣಿಕರಿಲ್ಲದೆ ಭಣಗುಡುತ್ತಿವೆ. ಇಲ್ಲಿನ ಹೋಟೆಲ್‍ಗಳು ಹಾಗೂ ಮಳಿಗೆಗಳು ನಷ್ಟ ಅನುಭವಿಸುತ್ತಿವೆ. ಹಾಗಾಗಿ ತಾತ್ಕಾಲಿಕವಾಗಿ ಮಳಿಗೆಗಳನ್ನು ಬಂದ್ ಮಾಡುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾಲಕರಿಗೆ ಪರಿಹಾರ ಧನ: ಅವಧಿ ವಿಸ್ತರಣೆ
ಆಟೊ, ಟ್ಯಾಕ್ಸಿ ಚಾಲಕರು ಪರಿಹಾರ ಧನ ಪಡೆಯಲು ‘ಸೇವಾ ಸಿಂಧು’ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.