ADVERTISEMENT

ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2011, 9:45 IST
Last Updated 16 ಏಪ್ರಿಲ್ 2011, 9:45 IST

ಹುಳಿಯಾರು: ಹೋಬಳಿಯ ದಸೂಡಿ ಗ್ರಾಮದ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ ಶುಕ್ರವಾರ ಮಧ್ಯಾಹ್ನ ಸಾವಿರಾರು ಭಕ್ತರು ಭಾಗವಹಿಸುವುದರೊಂದಿಗೆ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆಯಿಂದಲೇ ಪೂಜಾ ವಿಧಾನ ಆರಂಭವಾಗಿ 12ಗಂಟೆಗೆ ಸ್ವಾಮಿಯನ್ನು ದೇವಾಲಯದ ಆವರಣದಲ್ಲಿ ಶೃಂಗಾರಗೊಳಿಸಿದ್ದ ರಥದಲ್ಲಿ ಕೂರಿಸಲಾಯಿತು. ನೆರೆದಿದ್ದ ಸಾವಿರಾರು ಭಕ್ತರು ಸುಡು ಬಿಸಿಲನ್ನು ಲೆಕ್ಕಿಸದೆ ವೇದ ಘೋಷಣೆಯೊಂದಿಗೆ ರಥವನ್ನು ಎಳೆದು ಪಾವನರಾದರು.

ಕೆಲ ಭಕ್ತರು ರಥಕ್ಕೆ ಬಾಳೆಹಣ್ಣು ಎಸೆದರೆ, ಮತ್ತೆ ಕೆಲವರು ರಥಕ್ಕೆ ಹಣ್ಣು-ಕಾಯಿಯೊಂದಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾ.ಪಂ. ಅಧ್ಯಕ್ಷ ಜಿ.ಆರ್.ಸೀತಾರಾಮಯ್ಯ, ಜಿ.ಪಂ.ಸದಸ್ಯೆ ನಿಂಗಮ್ಮ ರಾಮಯ್ಯ, ತಾ.ಪಂ. ಸದಸ್ಯರಾದ ಆರ್.ಪಿ.ವಸಂತಯ್ಯ, ಕೆಂಕೆರೆ ನವೀನ್, ದಸೂಡಿ ಗ್ರಾ.ಪಂ.ಅಧ್ಯಕ್ಷೆ ರೇಣುಕಮ್ಮ, ಗ್ರಾ.ಪಂ. ಮಾಜಿ ಅಧ್ಯಕ್ಷ ಡಿ.ಬಿ.ರವಿಕುಮಾರ್, ದೇವಾಲಯ ಸಮಿತಿ ಕನ್ವೀನಿಯರ್ ಆರ್.ರಂಗಸ್ವಾಮಿ ಹಾಗೂ ಧರ್ಮದರ್ಶಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.