ADVERTISEMENT

ಔಷಧಿ ಗಿಡ ರಕ್ಷಿಸಿ: ಬಸವರಾಜು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2011, 10:40 IST
Last Updated 21 ಸೆಪ್ಟೆಂಬರ್ 2011, 10:40 IST

ತೋವಿನಕೆರೆ: ಹಳ್ಳಿಗಳಲ್ಲಿ ನೂರಾರು ವರ್ಷಗಳಿಂದ ಬಳಕೆಯಲ್ಲಿರುವ ಔಷಧಿ ಗಿಡಗಳ ಸಂರಕ್ಷಣೆ ಹಾಗೂ ಉಪಯೋಗದ ಬಗ್ಗೆ ಸೂಕ್ತ ಯೋಜನೆ ರೂಪಿಸಬೇಕು ಎಂದು ಸಂಸದ ಜಿ.ಎಸ್.ಬಸವರಾಜು ಅಭಿಪ್ರಾಯಪಟ್ಟರು.

ಗ್ರಾಮದ ಆರೋಗ್ಯ ರಕ್ಷಾ ಸಮಿತಿ , ಗ್ರಾಮ ಪಂಚಾಯಿತಿ, ಸಂಘ ಸಂಸ್ಥೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಏರ್ಪಡಿಸಿದ್ದ ಸಮುದಾಯ ಆರೋಗ್ಯ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ರೋಗ ಬರಲು ಕಾರಣವಾಗುವ ಅಂಶಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಶಿಸ್ತುಬದ್ಧ ಜೀವನದಿಂದ ಅನೇಕ ರೋಗ ತಡೆಯಬಹುದು ಎಂದರು.

`ಅಮೃತ ಬಳ್ಳಿ~ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಡಾ.ಸಿ.ಸೋಮಶೇಖರ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಮ್ಮ ಆರೋಗ್ಯ ಕೇಂದ್ರ ಎಂಬ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಶಿವಯೋಗಿ ಚ.ಕಳಸದ ಸೌಲಭ್ಯ ವಿತರಿಸಿ ಮಾತನಾಡಿದರು. ಡಿಎಚ್‌ಒ ಡಾ.ಚನ್ನಮಲ್ಲಯ್ಯ ಸಂವಾದ ನಡೆಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಟ.ಪಿ.ಸುಧಾ ನಾಗರಾಜು ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಟಿ.ಡಿ.ಪ್ರಸನ್ನಕುಮಾರ್, ಪಿ.ಸುಧಾಕರಲಾಲ್, ಎಪಿಎಂಸಿ ಸದಸ್ಯರಾದ ನಂದಿಹಳ್ಳಿ ಆರ್.ಕಾಮರಾಜು, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಬಿ.ಆರ್.ಲೋಕೇಶ್, ಜಿ.ಎಲ್.ಹನುಮಂತರಾಯಪ್ಪ, ಕೆ.ರವಿಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅನಸೂಯ ಸಿದ್ದರಾಜು, ನಾಗಾರಾಜಯ್ಯ, ಕೃಷಿಕ ಸಮಾಜದ ಅಧ್ಯಕ್ಷ ಟಿ.ಎ.ಹನುಮಂತಗೌಡ, ಟಿಎಚ್‌ಒ ಡಾ. ಮೋಹನ್‌ದಾಸ್ ಇತರರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.