ADVERTISEMENT

ಕಪ್ಪು ಬಾವುಟ ಪ್ರದರ್ಶನ: ಬಂಧನ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2012, 6:30 IST
Last Updated 16 ಆಗಸ್ಟ್ 2012, 6:30 IST

ತುಮಕೂರು: ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಬುಧವಾರ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿದ ಮಾದಿಗ ದಂಡೋರ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಕ್ರೀಡಾಂಗಣದ ಬದಿಯಲ್ಲಿದ್ದ ಕಾರ್ಯಕರ್ತರು ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ತಕ್ಷಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಕಪ್ಪು ಬಾವುಟ ಪ್ರದರ್ಶಿಸಿದರು. ತಕ್ಷಣ ಎಚ್ಚೆತ್ತ ಪೊಲೀಸರು 6 ಮಂದಿ ಕಾರ್ಯಕರ್ತರನ್ನು ಬಂಧಿಸಿದರು.

ಆಯೋಗವು ಒಳ ಮೀಸಲಾತಿ ವಿಂಗಡಣೆ ಮಾಡುವಂತೆ ವರದಿ ನೀಡಿದೆ. ಆದರೆ ರಾಜ್ಯ ಸರ್ಕಾರ ವರದಿಯನ್ನು ಅಂಗೀಕರಿಸಲು ವಿಳಂಬ ಮಾಡುತ್ತಿದೆ. ವರದಿ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಇಬ್ಬರು ಕಾರ್ಯಕರ್ತರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

ಖಂಡನೆ: ಪ್ರತಿಭಟನೆ ನಡೆಸಿದ ಮಾದಿಗ ದಂಡೋರ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನು ದಲಿತ ಸಂಘಟನೆ ಮುಖಂಡ ಚೇಳೂರು ವೆಂಕಟೇಶ್ ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.