ತುಮಕೂರು: ಲೋಕಸಭೆ ಮಾಜಿ ಉಪಸಭಾಧ್ಯಕ್ಷ ಎಸ್.ಮಲ್ಲಿಕಾರ್ಜುನಯ್ಯ ಅಂತ್ಯಕ್ರಿಯೆ ಶುಕ್ರವಾರ ಹುಟ್ಟೂರು ತಾಲ್ಲೂಕಿನ ಹೊನಸಿಗೆರೆಯ ತೋಟದಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಬೆಳಿಗ್ಗೆ ಗಾಂಧಿನಗರದ ನಿವಾಸದಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಯಿತು. ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಪಾರ ಅಭಿಮಾನ ಬಳಗದ ಸಮ್ಮುಖದಲ್ಲಿ ಮಲ್ಲಿಕಾರ್ಜುನಯ್ಯ ಮಧ್ಯಾಹ್ನ 1 ಗಂಟೆಗೆ ಪಂಚಭೂತಗಳಲ್ಲಿ ಲೀನವಾದರು. ಅಂತ್ಯಸಂಸ್ಕಾರಕ್ಕೂ ಮುನ್ನ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು.
ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ, ಅನಂತ್‌ಕುಮಾರ್, ಸಚಿವ ಟಿ.ಬಿ.ಜಯಚಂದ್ರ, ಶಾಸಕ ಬಿ.ಸುರೇಶ್‌ಗೌಡ, ಬಿಜೆಪಿ ಮುಖಂಡರಾದ ಸಂತೋಷ್, ಜಿ.ಎಸ್.ಬಸವರಾಜು, ವಿ.ಸೋಮಣ್ಣ, ಸುಧೀಂದ್ರ ಕುಲಕರ್ಣಿ ಮತ್ತಿತರ ಗಣ್ಯರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.