ADVERTISEMENT

ಕೆಎಸ್‌ಆರ್‌ಟಿಸಿ ಬಸ್ ಸಮಸ್ಯೆ: ಶಾಸಕ ಚರ್ಚೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2013, 10:21 IST
Last Updated 4 ಸೆಪ್ಟೆಂಬರ್ 2013, 10:21 IST

ಕೊರಟಗೆರೆ: ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಾಸಕ ಪಿ.ಆರ್.ಸುಧಾಕರಲಾಲ್ ಸಾರಿಗೆ ಸಮಸ್ಯೆ ಕುರಿತು ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.

ತಾಲ್ಲೂಕಿನ ಬೈರೇನಹಳ್ಳಿ, ಬೈಚಾಪುರ, ಅಕ್ಕಿರಾಂಪುರ, ಹೊಳವನಹಳ್ಳಿ ಭಾಗದ ವಿದ್ಯಾರ್ಥಿಗಳು ಬಸ್ ಸೌಲಭ್ಯ ಇಲ್ಲದೆ ಪರದಾಡುತ್ತಿರುವ ಬಗ್ಗೆ ಶಾಸಕರ ಗಮನ ಸೆಳೆದರು. ಕೆಲ  ಬಸ್‌ಗಳ ಚಾಲಕರು ಹಾಗೂ ನಿರ್ವಾಹಕರು ವಿದ್ಯಾರ್ಥಿಗಳೊಂದಿಗೆ ದೌರ್ಜನ್ಯದಿಂದ ವರ್ತಿಸುವ ಕುರಿತು ಗಮನ ಸೆಳೆದರು.

ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕ ಸುಧಾಕರಲಾಲ್, ದೌರ್ಜನ್ಯ ಮಾಡುವ ಚಾಲಕ- ನಿರ್ವಾಹಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಸಮಸ್ಯೆ ಪರಿಹಾರವಾಗದಿದ್ದರೆ ವಿದ್ಯಾರ್ಥಿಗಳೊಂದಿಗೆ ಇಲಾಖೆ ಕಚೇರಿ ಎದುರು ಧರಣಿ ನಡೆಸುವುದಾಗಿ ಎಚ್ಚರಿಸಿದರು.

ಕೆಎಸ್‌ಆರ್‌ಟಿಸಿ ತುಮಕೂರು ವಿಭಾಗದ ಮುಖ್ಯಸ್ಥ ಶಿವಮೂರ್ತಿ ಮಾತನಾಡಿ, ಸಾರಿಗೆ ಸಿಬ್ಬಂದಿಯು ಸಾರ್ವಜನಿಕರೊಂದಿಗೆ ದೌರ್ಜನ್ಯ ಹಾಗೂ ಅಸಭ್ಯ ವರ್ತನೆ ತೋರಿದರೆ ಅಂಥವರ ವಿರುದ್ಧ ಲಿಖಿತ ದೂರು ನೀಡಬೇಕು. ಉದ್ಧಟ ವರ್ತನೆಯ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದರು. ತಹಶೀಲ್ದಾರ್ ರಾಮಚಂದ್ರಪ್ಪ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.