ADVERTISEMENT

ಕ್ಷಯರೋಗದಿಂದ ಸಾವು: ತಡೆಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2012, 8:55 IST
Last Updated 25 ಮಾರ್ಚ್ 2012, 8:55 IST

ತುಮಕೂರು: ಕ್ಷಯರೋಗ ನಿವಾರಣೆಗೆ ಜಿಲ್ಲಾಡಳಿತ ಸಕಲ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿ ಆರ್.ಕೆ.ರಾಜು ಇಲ್ಲಿ ಶನಿವಾರ ತಿಳಿಸಿದರು.`ವಿಶ್ವ ಕ್ಷಯರೋಗ ದಿನಾಚರಣೆ~ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ಷಯರೋಗ ನಿವಾರಣೆಯನ್ನು ಆದ್ಯತೆ ವಿಚಾರವಾಗಿ ಪರಿಗಣಿಸಬೇಕೆಂದು ತಿಳಿಸಿದರು.

2050ನೇ ಇಸವಿ ಒಳಗೆ ಕ್ಷಯರೋಗವನ್ನು ಸಂಪೂರ್ಣ ನಿಯಂತ್ರಿಸುವ, 2015ರ ಒಳಗೆ ಕ್ಷಯರೋಗದ ಸಾವುಗಳನ್ನು ಅರ್ಧದಷ್ಟು ಕಡಿಮೆ ಮಾಡುವ ಗುರಿಯನ್ನು ವಿಶ್ವಸಂಸ್ಥೆ ವಿಧಿಸಿದೆ ಎಂದು ಮಾಹಿತಿ ನೀಡಿದರು.

ಕ್ಷಯ ರೋಗ ನಿವಾರಣೆಗಾಗಿ ಶ್ರಮಿಸಿದ 21 ಜನರನ್ನು ಅಭಿನಂದಿಸಿದ ಅವರು, ಪುರಸ್ಕಾರ ಪಡೆಯಬೇಕೆಂಬ ಮನೋಭಾವದಿಂದ ಯಾರೂ ಕೆಲಸ ಮಾಡುವುದಿಲ್ಲ. ಆದರೆ ಪ್ರಾಮಾಣಿಕ ಕೆಲಸಕ್ಕೆ ಪುರಸ್ಕಾರ ಸಿಕ್ಕೇ ಸಿಗುತ್ತದೆ ಎಂದರು.

ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಅಸ್ಮಾ ತಬಸ್ಸುಮ್ ಮಾತನಾಡಿ, ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ ಜಾರಿಯಾದ ನಂತರ ಜಿಲ್ಲೆಯಲ್ಲಿ ಇಲ್ಲಿಯವರೆಗೆ 28,660 ಕ್ಷಯ ರೋಗಿಗಳನ್ನು ಗುರುತಿಸಲಾಗಿದೆ. 19,702 ರೋಗಿಗಳು ಚಿಕಿತ್ಸೆ ಪಡೆದು ಗುಣ ಹೊಂದಿದ್ದಾರೆ. ಪ್ರಸ್ತುತ 2716 ರೋಗಿಗಳು ಡಾಟ್ಸ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದರಾಜು, ಜಿಲ್ಲಾ ಸರ್ಜನ್ ಡಾ.ನಂಜುಂಡಪ್ಪ, ಜಿಲ್ಲಾ ವೈದ್ಯಾಧಿಕಾರಿ ಡಾ.ಚನ್ನ ಮಲ್ಲಯ್ಯ, ಆರ್‌ಸಿಎಚ್ ಅಧಿಕಾರಿ ಡಾ. ರಜನಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.