ಮಧುಗಿರಿ: ಪಂಚಾಯಿತಿಗಳಿಗೆ ರಾಜ್ಯ ಸರ್ಕಾರ ಹಣ ನೀಡಿರುವುದು ಸಾಬೀತಾದರೆ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು.
ತಾಲ್ಲೂಕು ಕುರುಬರ ಸಂಘದ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ವಿದ್ಯಾರ್ಥಿ ನಿಲಯದ ಉದ್ಘಾಟನೆ ಹಾಗೂ ಕನಕ ಸಂದೇಶ ಸಮಾವೇಶದಲ್ಲಿ ಮಾತನಾಡಿದ ಅವರು ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಸರ್ಕಾರ ಒಂದು ನಯಾ ಪೈಸೆ ಕೂಡ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಇಲ್ಲದಿದ್ದರೆ ಪಂಚಾಯಿತಿಗೆ ಕಸ ಪೊರಕೆ ಕೊಳ್ಳಲೂ ಹಣ ಇರುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದರು.
ಶೋಷಿತ ವರ್ಗಗಳು ಆರ್ಥಿಕ, ಸಾಮಾಜಿಕವಾಗಿ ಮುಂದೆ ಬರಲು ಕೇಂದ್ರ ಸರ್ಕಾರ ಕಡ್ಡಾಯ ಶಿಕ್ಷಣ ಯೋಜನೆ, ಆಹಾರ ಭದ್ರತೆ ಯೋಜನೆ, ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿ 4850 ಕೋಟಿ ರೂಪಾಯಿ ರಾಜ್ಯಕ್ಕೆ ಬಿಡುಗಡೆ ಮಾಡಿದೆ. ಆದರೆ ಅದರಲ್ಲಿ ರಾಜ್ಯ ಸರ್ಕಾರ ಕೇವಲ ರೂ. 1300 ಕೋಟಿ ಮಾತ್ರ ಖರ್ಚು ಮಾಡಿದೆ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.