ADVERTISEMENT

ಡಿಸಿ ಕಚೇರಿಯಲ್ಲಿ ಚುನಾವಣೋತ್ಸಾಹ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2014, 6:14 IST
Last Updated 20 ಮಾರ್ಚ್ 2014, 6:14 IST

ತುಮಕೂರು: ನಾಮಪತ್ರ ಸಲ್ಲಿಕೆ ಸಂದರ್ಭ ಅಭ್ಯರ್ಥಿ ಸೇರಿ 5 ಮಂದಿಗೆ ಮಾತ್ರ ಪ್ರವೇಶ ಅವಕಾಶ. ಆದರೆ ಬುಧವಾರ ಜೆಡಿಎಸ್‌ ಅಭ್ಯರ್ಥಿ ಎ.ಕೃಷ್ಣಪ್ಪ ನಾಮಪತ್ರ ಸಲ್ಲಿಸುವ ಸಂದರ್ಭ ಎಚ್‌.ಡಿ.ದೇವೇಗೌಡ, ನಾಲ್ವರು ಶಾಸಕರು ಸೇರಿದಂತೆ 8 ಮಂದಿಗೆ ಚುನಾವಣಾಧಿಕಾರಿ ಕೆ.ಎಸ್‌.ಸತ್ಯಮೂರ್ತಿ ಅವಕಾಶ ಕಲ್ಪಿಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದು ಕಂಡು ಬಂತು.

ಪತ್ರಕರ್ತರಿಗೆ ಗೇಟ್‌ಪಾಸ್‌
ನಾಮಪತ್ರ ಸಲ್ಲಿಕೆ ಸಂದರ್ಭ ಪತ್ರಕರ್ತರು ಮತ್ತು ಪತ್ರಿಕಾ ಛಾಯಾಗ್ರಾಹಕರಿಗೆ ಪ್ರವೇಶ ನಿರಾಕರಿಸಲಾಗಿತ್ತು. ಅಲ್ಲದೆ ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಲು ಸಹ ನಿರ್ಬಂಧವಿದೆ. ನಾವೇ ಫೋಟೊ ಕೊಡುತ್ತೇವೆ ಎಂದು ಜಿಲ್ಲಾಧಿಕಾರಿ ಕೆ.ಎಸ್‌.ಸತ್ಯಮೂರ್ತಿ ಹೇಳಿದರು.

ಛಾಯಾಗ್ರಹಕರಿಗೆ ಸೆನ್ಸಾರ್‌ ಜಾರಿ
ಪತ್ರಿಕೆಗಳಿಗೆ ನೀಡುವ ಫೋಟೊಗಳನ್ನು ಪರಿಶೀಲಿಸಿ ಅನಂತರ ಕೊಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಫೋಟೊ ತೆಗೆಯುವಂತಿಲ್ಲ. ಜಿಲ್ಲಾಧಿಕಾರಿ ಅಪ್ಪಣೆ ಇಲ್ಲದೆ ಫೋಟೋ ತೆಗೆಯುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಸಹಾಯಕ ಅಧಿಕಾರಿಯೊಬ್ಬರು ಪತ್ರಕರ್ತರಿಗೆ ತಿಳಿಸಿದರು. ಜಿಲ್ಲೆಯಲ್ಲಿ ತುರ್ತು ಪರಿಸ್ಥಿತಿ ಜಾರಿ ಮಾಡಲಾಗದೆಯೆ? ಎಂದು ಪತ್ರಕರ್ತರು ಆ ಅಧಿಕಾರಿಯನ್ನು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.