ADVERTISEMENT

ಪರೀಕ್ಷೆ ಭಯ; ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2018, 9:13 IST
Last Updated 13 ಮಾರ್ಚ್ 2018, 9:13 IST

ತುಮಕೂರು: ನಗರದ ವಿದ್ಯಾವಾಹಿನಿ ಕಾಲೇಜಿನಲ್ಲಿ ಸೋಮವಾರ ದ್ವಿತೀಯ ಪಿಯುಸಿ ಗಣಿತ ವಿಷಯ ಪರೀಕ್ಷೆ ನಡೆದಾಗ ಪ್ರಶ್ನೆ ಪತ್ರಿಕೆ ನೋಡಿ ಹೆದರಿದ ವಿದ್ಯಾರ್ಥಿ ಪರೀಕ್ಷಾ ಕೇಂದ್ರದ ಮೇಲೆ ಹತ್ತಿ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಆತಂಕ ಸೃಷ್ಟಿಸಿತ್ತು.

ಹೀಗೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವಿದ್ಯಾರ್ಥಿ ಮಹೇಶ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಭಾನುಪ್ರಕಾಶ್ ಎಂದು ತಿಳಿದಿದೆ.

ಮೂತ್ರ ವಿಸರ್ಜನೆಗೆ ಹೊರ ಹೋದ ವಿದ್ಯಾರ್ಥಿ ಪರೀಕ್ಷಾ ಕೇಂದ್ರದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸಿದ್ದ. ಬಳಿಕ ಪ್ರಾಚಾರ್ಯರು ಹಾಗೂ ಸಿಬ್ಬಂದಿ ಮನವೊಲಿಸಿ ಕರೆತಂದು ಧೈರ್ಯ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.