ತುಮಕೂರು: ಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ವಿಪತ್ತು ಪರಿಹಾರ ನಿಧಿಯಿಂದ ರೂ.10ಕೋಟಿ ಅನುದಾನ ಬಿಡುಗಡೆ ಮಾಡಿದೆ.ಮಾರ್ಚ್ 20ರಂದು ಬಿಡುಗಡೆಯಾಗಿರುವ ಅನುದಾನವನ್ನು ಕುಡಿಯುವ ನೀರು, ಜಾನುವಾರುಗಳ ಸಂರಕ್ಷಣೆಗಾಗಿ ಮಾತ್ರ ಬಳಸಿಕೊಳ್ಳುವಂತೆ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಕಳೆದ ಫೆ.27ರಂದು ಬರ ಪರಿಹಾರಕ್ಕಾಗಿ ಸರ್ಕಾರ ರೂ.5 ಕೋಟಿ ಅನುದಾನ ಬಿಡುಗಡೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಪ್ರತಿ ತಾಲ್ಲೂಕಿನಲ್ಲಿಯೂ ಪ್ರತ್ಯೇಕ ಸಹಾಯವಾಣಿಗಳನ್ನು ಪ್ರಾರಂಭಿಸುವಂತೆ ಮತ್ತು ತಾಂತ್ರಿಕ ಸಿಬ್ಬಂದಿಯ ಸೇವೆಯೊಂದಿಗೆ ದೂರು ದಾಖಲಾದ 24 ಗಂಟೆಯೊಳಗಾಗಿ ಕುಡಿಯುವ ನೀರು ಸಮಸ್ಯೆ ಪರಿಹರಿಸುವಂತೆ ಸರ್ಕಾರ ಆದೇಶಿಸಿದೆ.
ಜಿಲ್ಲೆಯ ಎಲ್ಲ ಹೋಬಳಿಗಳಲ್ಲೂ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಜಾನುವಾರು ಸಂರಕ್ಷಣೆ, ಉದ್ಯೋಗ ಖಾತರಿ ಯೋಜನೆ ಮತ್ತಿತರ ಬರಪರಿಹಾರ ಕಾಮಗಾರಿಗಳನ್ನು ಅವರ ಉಸ್ತುವಾರಿಯಲ್ಲಿಯೇ ನಿರ್ವಹಿಸಬೇಕು ಎಂದು ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.