ADVERTISEMENT

ಮತದಾನ ಜಾಗೃತಿಗೆ ಎತ್ತಿನಗಾಡಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2018, 14:05 IST
Last Updated 29 ಏಪ್ರಿಲ್ 2018, 14:05 IST

ಹೆಬ್ಬೂರು: ಮತದಾನ ಜಾಗೃತಿ ಸಮಿತಿಯು ಶುಕ್ರವಾರ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಎತ್ತಿನ ಗಾಡಿ ಜಾಥಾ ನಡೆಸಿತು. ಗ್ರಾಮದಲ್ಲಿ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಘೋಷಣೆಗಳೊಂದಿಗೆ ಜಾಥಾ ನಡೆಯಿತು.

ಜಾಥಾಕ್ಕೆ ಚಾಲನೆ ನೀಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ನಾಗಣ್ಣ ಮಾತನಾಡಿ, ‘ಗ್ರಾಮಾಂತರ ಜನರಿಗೆ ಹತ್ತಿರವಾದ ಎತ್ತಿನಗಾಡಿ ಬಳಸಿಕೊಳ್ಳುವ ಮೂಲಕ ಮತದಾರರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲು ಜಾಥಾ ಆಯೋಜಿಸಲಾಗಿದೆ. ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮೇ 12ರಂದು ಮತದಾನ ಮಾಡಬೇಕು’ ಎಂದು ಹೇಳಿದರು.

ಈ ಬಾರಿ ಚುನಾವಣಾ ಆಯೋಗವು ಮತ ಖಾತ್ರಿ ಯಂತ್ರ ಬಳಸುತ್ತಿದೆ. ಇದರಿಂದ ನಾವು ಯಾರಿಗೆ ಮತ ಚಲಾಯಿಸಿದ್ದೇವೆ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಪ್ರತಿಯೊಬ್ಬರೂ ಮತ ಚಲಾಯಿಸಿದಾಗ ಮಾಆತ್ರ ಉತ್ತಮ ಜನಪ್ರತಿನಿಧಿ, ಸರ್ಕಾರ ಆಯ್ಕೆ ಮಾಡಬಹುದು ಎಂದು ತಿಳಿಸಿದರು. ಜಾಥಾದಲ್ಲಿ ಡಿವೈಎಸ್ಪಿ ಕೆ.ಎಸ್.ನಾಗರಾಜ್, ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.