ಕೊರಟಗೆರೆ: ರಾಜ್ಯದ ಜನತೆ ನನ್ನ ಮೇಲೆ ನಂಬಿಕೆ ಇಟ್ಟು ಮುಂದಿನ ಬಾರಿ ಅಧಿಕಾರಕ್ಕೆ ತಂದರೆ ಪ್ರಾಮಾಣಿಕವಾಗಿ ಜನಪರ ಕಾರ್ಯಗಳನ್ನು ಹಮ್ಮಿಕೊಂಡು ಮಾದರಿ ರಾಜ್ಯ ನಿರ್ಮಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ತಾಲ್ಲೂಕಿನ ಎಲೆರಾಂಪುರದಲ್ಲಿ ಶುಕ್ರವಾರ ಬಸವೇಶ್ವರ ದೇಗುಲ ಹಾಗೂ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಅವರು, ನನ್ನ ಮೇಲೆ ಪಂಚಪೀಠದ ಗುರುಗಳ ಆಶೀರ್ವಾದ ಇರುವ ಕಾರಣ ಪುರಸಭೆ ಸದಸ್ಯನಾಗಿದ್ದ ನಾನು ಮುಖ್ಯಮಂತ್ರಿಯಾದೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಈ ಭಾಗದ ನೀರಾವರಿ ಯೋಜನೆಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ಭರವಸೆ ನೀಡಿದರು.
ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ನೀರಾವರಿ ಯೋಜನೆ ಹೋರಾಟಕ್ಕೆ ಯಡಿಯೂರಪ್ಪ ಅವರ ಸಹಕಾರ ಸ್ಮರಿಸಿದರು.
ಸಿದ್ದರಬೆಟ್ಟದ ವೀರಭದ್ರಶಿವಾಚಾರ್ಯ ಸ್ವಾಮೀಜಿ, ಎಲೆರಾಂಪುರದ ಹನುಮಂತನಾಥ ಸ್ವಾಮೀಜಿ, ಅಟವಿ ಶಿವಲಿಂಗ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮುಖಂಡರಾದ ಆರ್.ಎಸ್.ರಾಜಣ್ಣ, ಚಂದ್ರಶೇಖರಯ್ಯ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.