ADVERTISEMENT

ರೈತರಿಗೆ ಪಿಂಚಣಿಗೆ ಆಗ್ರಹಿಸಿ ಜಾಥಾ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2012, 19:30 IST
Last Updated 12 ಮಾರ್ಚ್ 2012, 19:30 IST
ರೈತರಿಗೆ ಪಿಂಚಣಿಗೆ ಆಗ್ರಹಿಸಿ ಜಾಥಾ
ರೈತರಿಗೆ ಪಿಂಚಣಿಗೆ ಆಗ್ರಹಿಸಿ ಜಾಥಾ   

ತುಮಕೂರು: ಅರವತ್ತು ವರ್ಷ ತುಂಬಿದ ರೈತರು, ಕೃಷಿ ಅವಲಂಬಿತ ಕಾರ್ಮಿಕರಿಗೆ ಮಾಸಿಕ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ, ರಾಜ್ಯ ಕೃಷಿ ಕಾರ್ಮಿಕ ಸಂಘ, ರಾಜ್ಯ ಸ್ತ್ರೀಶಕ್ತಿ ಮತ್ತು ಮಹಿಳಾ ಸ್ವಸಹಾಯ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಜಾಥಾ ನಡೆಯಿತು.

ನಗರದ ಟೌನ್‌ಹಾಲ್ ವೃತ್ತದಲ್ಲಿ ಜಮಾಯಿಸಿದ ರೈತರು, ಈಗಾಗಲೇ ತಮಿಳುನಾಡು, ಮಹಾರಾಷ್ಟ್ರದಲ್ಲಿ ಅಲ್ಲಿನ ಸರ್ಕಾರಗಳು ರೈತರ ಪಿಂಚಣಿ ಯೋಜನೆ ಜಾರಿಗೊಳಿಸಿವೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರವು ಹಿರಿಯ ರೈತರಿಗೆ, ರೈತ ಕಾರ್ಮಿಕರಿಗೆ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.
 
ಸ್ತ್ರೀಶಕ್ತಿ, ಮಹಿಳಾ ಸ್ವಸಹಾಯ ಸಂಘಗಳಿಗೆ ರೂ. 10 ಲಕ್ಷದವರೆಗೆ ಬಡ್ಡಿ ರಹಿತ ಸಾಲ ನೀಡಬೇಕು. ಸ್ತ್ರೀಶಕ್ತಿ ಸಂಘಗಳು ಉತ್ಪಾದಿಸಿದ ವಸ್ತುಗಳನ್ನು ಸರ್ಕಾರವೇ ಖರೀದಿಸಬೇಕು ಎಂದು ಆಗ್ರಹಿಸಿದರು.

ಅಖಿಲ ಭಾರತ ಕಿಸಾನ್ ಸಂಘದ ಸಂಚಾಲಕ ಎನ್.ಶಿವಣ್ಣ, ಎಐಟಿಯುಸಿ ಜಿಲ್ಲಾ ಘಟಕದ ಉಪಾಧ್ಯಕ್ಷ ಕಂಬೇಗೌಡ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ, ಮುಖಂಡರಾದ ಕುಮಾರ್ ಸಿಂಗ್, ಕಲ್ಲಪ್ಪ, ಬಸವರಾಜು, ಗೌರಮ್ಮ, ಕರಿಯಣ್ಣ ಇನ್ನಿತರರು ಇದ್ದರು.

 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.