ತುಮಕೂರು: ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಮಾ. 24ರಂದು ನಾಮಪತ್ರ ಸಲ್ಲಿಸಲಿದ್ದು, ಆ ವೇಳೆ ಶಕ್ತಿ ಪ್ರದರ್ಶನ ನಡೆಸಲು ಸಿದ್ಧತೆ ನಡೆದಿದೆ.
ಕಾರ್ಯಕರ್ತರು, ಮುಖಂಡರನ್ನು ಕಲೆಹಾಕುವ ಸಲುವಾಗಿ ಶನಿವಾರ ನಗರದ ಹಲವು ವಾರ್ಡ್‌ಗಳಲ್ಲಿ ಬಿಜೆಪಿ ಮುಖಂಡರು ಸಭೆ ನಡೆಸಿದರು. ಕ್ಯಾತ್ಸಂದ್ರದಲ್ಲಿ ಸಭೆ ನಡೆಸಿದ ಬಳಿಕ ಪಕ್ಷದ ಹಲವು ಮುಖಂಡರ ಮನೆಗಳಿಗೆ ಭೇಟಿ ನೀಡಿ ನಾಮಪತ್ರ ಸಲ್ಲಿಕೆ ವೇಳೆ ಬರುವಂತೆ ಮನವಿ ಮಾಡಿದರು.
20ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಕಾರ್ಯಕರ್ತರ ಸಭೆ ನಡೆಸಲಾಯಿತು. ಪಕ್ಷದ ಮುಖಂಡರಾದ ರವಿ ಹೆಬ್ಬಾಕ, ನಾಗಣ್ಣ ಬಾವಿಕಟ್ಟೆ, ಕೆ.ಪಿ.ಮಹೇಶ್, ರುದ್ರೇಶ್, ಬ್ಯಾಟರಂಗೇಗೌಡ, ಜ್ಯೋತಿಗಣೇಶ್ ಸೇರಿದಂತೆ ಆಯಾ ವಾರ್ಡ್ ಸದಸ್ಯರು ಪಕ್ಷದ ಪ್ರಮುಖ ಮುಖಂಡರ ಮನೆಗಳಿಗೆ ಭೇಟಿ ನೀಡಿದ್ದರು.
ನಗರದ ಅರ್ಧದಷ್ಟು ವಾರ್ಡ್‌ಗಳಲ್ಲಿ ಶನಿವಾರ ಸಭೆ, ಮುಖಂಡರ ಮನೆಗಳಿಗೆ ಭೇಟಿ ನೀಡಲಾಗಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಹಾಜರಿರುವಂತೆ ಕೋರಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.