ADVERTISEMENT

ಸಂವಿಧಾನ ತತ್ವಗಳ ಅನುಷ್ಠಾನಕ್ಕೆ ಸಲಹೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2011, 8:30 IST
Last Updated 12 ಸೆಪ್ಟೆಂಬರ್ 2011, 8:30 IST

ಚಿಕ್ಕಬಳ್ಳಾಪುರ: `ನಮ್ಮ ದೇಶವು ವಿಶ್ವದಲ್ಲೇ ಶ್ರೇಷ್ಠವಾದ ಸಂವಿಧಾನ ವನ್ನು ಹೊಂದಿದ್ದು, ಇದರ ಬಗ್ಗೆ ನಾವೆಲ್ಲರೂ ಹೆಮ್ಮೆಪಡಬೇಕಿದೆ. ಸಂವಿಧಾನದ ಆಶಯಗಳನ್ನು ಮತ್ತು ಅಂಶಗಳನ್ನು ಅನುಷ್ಠಾನಕ್ಕೆ ತರುವುದರ ಮೂಲಕ ದೇಶವನ್ನು ಅಭಿವೃದ್ಧಿಪಥದಲ್ಲಿ ಮುನ್ನಡೆಸಬೇಕಿದೆ~ ಎಂದು ಸರ್ಕಲ್ ಇನ್ಸ್‌ಪೆಕ್ಟರ್  ಎಸ್.ಮಹೇಶ್‌ಕುಮಾರ್ ತಿಳಿಸಿದರು.

ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರೌಢಶಾಲೆ ಆವರಣದಲ್ಲಿ ಶನಿವಾರ ನಡೆದ ಅಣಕು ವಿಧಾನಸಭಾ ಅಧಿವೇಶನ ಮತ್ತು ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ದೇಶದ ಮಹನೀಯರು ಎಲ್ಲ ರೀತಿಯ ಚಿಂತನೆ ಮತ್ತು ಚರ್ಚೆಗಳನ್ನು ಅತ್ಯುತ್ತಮ ಸಂವಿಧಾನವನ್ನು ರಚಿಸಿದ್ದು, ಅದರ ಘನತೆ ಮತ್ತು ಗೌರವ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ~ ಎಂದರು.

`ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯಗೊಂಡು ಆರು ದಶಕಗಳೇ ಕಳೆದರೂ ನಮ್ಮ ದೇಶವು ಇನ್ನೂ ಅಭಿವೃದ್ಧಿಶೀಲ ದೇಶವಾಗಿಯೇ ಉಳಿದುಕೊಂಡಿದೆ. ದೇಶವನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಪೈಪೋಟಿಯಲ್ಲಿ ಮುಂಚೂಣಿಗೆ ತರುವಂತೆ ಮಾಡುವಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು~ ಎಂದು ಅವರು ತಿಳಿಸಿದರು. ಸರ್ ಎಂ.ವಿಶ್ವೇಶ್ವರಯ್ಯ ಶಾಲೆಯ ಮುಖ್ಯ ಶಿಕ್ಷಕ ದೇವರಾಜ್, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಇತರರು ಇದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.