ADVERTISEMENT

ಸಾಲಗಾರರ ರಾಜ್ಯ ಮಾಡಿದ ಸಿದ್ಧರಾಮಯ್ಯ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2017, 9:09 IST
Last Updated 3 ನವೆಂಬರ್ 2017, 9:09 IST
ಕುಣಿಗಲ್ ಪಟ್ಟಣದಲ್ಲಿ ಗುರುವಾರ ರಾತ್ರಿ ಬಿಜೆಪಿಯ ಪರಿವರ್ತನಾ ಯಾತ್ರೆಯ ಬೃಹತ್ ಬಹಿರಂಗ ಸಭೆಯನ್ನು ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಗಾರಿ ಬಾರಿಸಿ ಉದ್ಘಾಟಿಸಿದರು. ಡಿ.ವಿ. ಸದಾನಂದಗೌಡ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಡಿ.ಕೃಷ್ಣಕುಮಾರ್ ಇದ್ದರು
ಕುಣಿಗಲ್ ಪಟ್ಟಣದಲ್ಲಿ ಗುರುವಾರ ರಾತ್ರಿ ಬಿಜೆಪಿಯ ಪರಿವರ್ತನಾ ಯಾತ್ರೆಯ ಬೃಹತ್ ಬಹಿರಂಗ ಸಭೆಯನ್ನು ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಗಾರಿ ಬಾರಿಸಿ ಉದ್ಘಾಟಿಸಿದರು. ಡಿ.ವಿ. ಸದಾನಂದಗೌಡ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಡಿ.ಕೃಷ್ಣಕುಮಾರ್ ಇದ್ದರು   

ಕುಣಿಗಲ್: ‘ರಾಜ್ಯದ ಅಭಿವೃದ್ಧಿ ಮಾಡದೆ, ಯೋಜನೆಗಳ ಹಣ ಲೂಟಿ ಮಾಡಿ ಕಾಲಹರಣ ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಾಲಗಾರರ ರಾಜ್ಯ ಮಾಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.

ಗುರುವಾರ ಸಂಜೆ ಪಟ್ಟಣದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಬಹಿರಂಗ ಸಭೆಯನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮುಖ್ಯಮಂತ್ರಿ ಎಲ್ಲ ವ್ಯವಹಾರಗಳಲ್ಲೂ ಕಮಿಷನ್ ಪಡೆದು ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

ಈ ಸರ್ಕಾರ ಬೆಂಗಳೂರಿನ ಮೂಲೆ ನಿವೇಶನಗಳನ್ನೂ ಬಿಟ್ಟಿಲ್ಲ. ಈ ನಿವೇಶನಗಳನ್ನು ಅಡಮಾನ ಇಟ್ಟು ₹ 900 ಕೋಟಿ ಸಾಲ ಮಾಡಿದೆ. ಮುಂದಿನ ದಿನಗಳಲ್ಲಿ ವಿಧಾನಸೌಧವನ್ನೂ ಸಹ ಅಡಮಾನ ಇಡಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘ಮುಖ್ಯಮಂತ್ರಿ ಸೊಕ್ಕಿನ ಮಾತು ಕೂಡಲೇ ನಿಲ್ಲಿಸಬೇಕು. ಇಲ್ಲದೆ ಹೋದರೆ ಪರಿಣಾಮ ನೆಟ್ಟಗಿರಲ್ಲ’ ಎಂದು ಕಾರ್ಯಕ್ರಮದಲ್ಲಿ ಎಚ್ಚರಿಕೆ ನೀಡಿದರು.

ADVERTISEMENT

‘ಪರಿವರ್ತನಾ ಯಾತ್ರೆ ಮೊದಲ ದಿನವೇ ಕುಣಿಗಲ್ ಪ್ರವೇಶಿಸಿದೆ. ಈ ತುಮಕೂರು ಜಿಲ್ಲೆಯಲ್ಲಿ ಕನಿಷ್ಠ 7 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ’ ಎಂದು ಹೇಳಿದರು.
‘ತುಮಕೂರು ಜಿಲ್ಲೆಗೆ ಕೇಂದ್ರ ಸರ್ಕಾರವು ಎಚ್.ಎ.ಎಲ್ ಘಟಕ, ರಾಷ್ಟ್ರೀಯ ಬಂಡವಾಳ ಮತ್ತು ಉತ್ಪಾದನಾ ವಲಯ (ನಿಮ್ಜ್) ನೀಡಿದೆ. ₹ 100 ಕೋಟಿಯಲ್ಲಿ ಆಹಾರ ಸಂಸ್ಕರಣ ಘಟಕ ಸ್ಥಾಪಿಸಿದೆ. ಕಾಂಗ್ರೆಸ್ ಸರ್ಕಾರವು 50 ವರ್ಷಗಳಲ್ಲಿ ನೀಡದ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಈ ಜಿಲ್ಲೆಗೆ ಕೊಟ್ಟಿದ್ದಾರೆ’ ಎಂದು ವಿವರಿಸಿದರು.

ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ಶಾಸಕ ಸಿ.ಟಿ.ರವಿ ಮಾತನಾಡಿದರು. ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ವಿಧಾನ ಪರಿಷತ್ ಪ್ರತಿ
ಪಕ್ಷದ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಈಶ್ವರಪ್ಪ, ಸಂಸದರಾದ ಶೋಭಾ ಕರಂದ್ಲಾಜೆ, ಬಿ.ಶ್ರೀರಾಮುಲು, ಮುಖಂಡರಾದ ಗೋವಿಂದ ಕಾರಜೋಳ, ವಿ.ಸೋಮಣ್ಣ, ಸೋಮಶೇಖರ್, ಯೋಗೀಶ್ವರ್, ವೈ.ಎ.ನಾರಾಯಣಸ್ವಾಮಿ, ನರೇಂದ್ರಬಾಬು, ರೇಣುಕಾಚಾರ್ಯ, ಗೋ.ಮಧುಸೂದನ, ತೇಜಸ್ವಿನಿ ರಮೇಶ್, ಜಿ.ಎಸ್.ಬಸವರಾಜ್ ಜಿ.ಪಂ ಸದಸ್ಯ ವೈ.ಎಚ್.ಹುಚ್ಚಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಜ್ಯೋತಿ ಗಣೇಶ್ ವೇದಿಕೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.