ADVERTISEMENT

ಹಿರಿಯ ಮಾರ್ಗದರ್ಶನದಲ್ಲಿ ಕ್ಷೇತ್ರದ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2018, 14:00 IST
Last Updated 29 ಏಪ್ರಿಲ್ 2018, 14:00 IST

ತುಮಕೂರು: ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಯಸಂದ್ರ ರವಿಕುಮಾರ್ ಶನಿವಾರ ಕಾಂಗ್ರೆಸ್ ಮುಖಂಡರೊಂದಿಗೆ ತಿಮ್ಮರಾಜನಹಳ್ಳಿ,ಸೋರೆಕುಂಟೆ, ನೆಲಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಊರುಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಸೀಬಿಯ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪ್ರಚಾರ ನಡೆಸಿದರು. ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ವಿವರಿಸಿ ಮತಯಾಚನೆ ಮಾಡಿದರು.

 ‘ ಜಿಲ್ಲೆಯಲ್ಲಿ ಅತ್ಯಂತ ಕಿರಿಯ ವಯಸ್ಸಿನ ಅಭ್ಯರ್ಥಿ ನಾನೇ ಆಗಿದ್ದೇನೆ.  ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇದುವರೆಗೂ ಜನರಿಗೆ ನೀಡಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ, ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ವಿದ್ಯಾಸಿರಿ ಯೋಜನೆಗಳು ಬಡ ಜನರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿವೆ' ಎಂದು ಹೇಳಿದರು.

ADVERTISEMENT

ಮುಖಂಡರಾದ  ಕೆಂಪಣ್ಣ,  ಓ.ಸಿ.ಕೃಷ್ಣಪ್ಪ, ಸಿದ್ದ ಬಾಲಯ್ಯ, ಚಂದ್ರಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.