ADVERTISEMENT

ಹುಣಸೇಹಳ್ಳಿ; ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2018, 7:35 IST
Last Updated 15 ಮಾರ್ಚ್ 2018, 7:35 IST
ಹುಣಸೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮಮತಾ ಶಿವಕುಮಾರ್ ಅವರನ್ನು ಜೆಡಿ(ಎಸ್‌) ತಾಲ್ಲೂಕು ಘಟಕದ ಅಧ್ಯಕ್ಷ ಆರ್‌.ಉಗ್ರೇಶ್‌, ಹುಣಸೇಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶಿವಕುಮಾರ್‌, ಟಿ.ಡಿ.ಮಲ್ಲೇಶ್‌ ಅಭಿನಂದಿಸಿದರು

ಶಿರಾ: ತಾಲ್ಲೂಕಿನ ಹುಣಸೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಜೆಡಿ(ಎಸ್) ಬೆಂಬಲಿತ ಮಮತಾ ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹುಣಸೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷೆಯಾಗಿದ್ದ ಶೋಭಾ ಅವರನ್ನು ಫೆಬ್ರವರಿ 28ರಂದು ಅವಿಶ್ವಾಸ ನಿರ್ಣಯದ ಮೂಲಕ ಪದಚ್ಯುತಿಗೊಳಿಸಲಾಗಿದ್ದರಿಂದ ಬುಧವಾರ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.

ಮಮತಾ ಶಿವಕುಮಾರ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಗಳಾಗಿದ್ದ ತಹಶೀಲ್ದಾರ್ ಆರ್.ಗಂಗೇಶ್ ಅವರು ಮಮತಾ ಶಿವಕುಮಾರ್ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.