ADVERTISEMENT

‘ನಕಲು ಕಳಂಕ ತೊಳೆಯಿರಿ’

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2013, 6:12 IST
Last Updated 17 ಡಿಸೆಂಬರ್ 2013, 6:12 IST

ತುಮಕೂರು: ಶೈಕ್ಷಣಿಕ ಜಿಲ್ಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿರುವುದು ನಕಲು, ಅಕ್ರಮ ವಿಧಾನದ ಮೂಲಕ ಎಂಬ ಕಳಂಕ ಇದೆ. ಇದನ್ನು ತೊಳೆದುಕೊಳ್ಳಬೇಕು ಎಂದು ತಿಪಟೂರು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭುಸ್ವಾಮಿ ಹೇಳಿದರು.

ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸೋಮವಾರ ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಹಾಗೂ ಉಪ ಪ್ರಾಚಾರ್ಯರ ಸಂಘ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸುಧಾರಣೆಗಾಗಿ ಕಾರ್ಯಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಶೇ 100ರಷ್ಟು  ಫಲಿತಾಂಶ ಪಡೆದ ಶಾಲೆಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ತುಮಕೂರು ಶೈಕ್ಷಣಿಕ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಗುಣಮಟ್ಟದ ಫಲಿತಾಂಶಕ್ಕೆ ಕಾರ್ಯಯೋಜನೆ ರೂಪಿಸಬೇಕಿದೆ. ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಲ್ಲಿ ಆವರಿಸುವ ಭಯ ಹೋಗಲಾಡಿಸಿ ಆತ್ಮವಿಶ್ವಾಸ ತುಂಬುವ ಜಬಾವ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳದೆ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಬೇಕು. ಮಕ್ಕಳೊಂದಿಗೆ ಶಿಕ್ಷಕರ ಒಡನಾಟ ಹೆಚ್ಚಾದಾಗ ಆತ್ಮವಿಶ್ವಾಸ ವೃದ್ಧಿಸಲಿದೆ. ಇದರಿಂದ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗುಣಮಟ್ಟದ ಫಲಿತಾಂಶ ಗಳಿಸಬಹುದು ಎಂದು ಹೇಳಿದರು.

ಚಿಕ್ಕನಾಯಕನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಚಿ.ನಾ.ನಾಗೇಶ್‌ ಮಾತನಾಡಿದರು. ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯ ಶಿಕ್ಷಕರನ್ನು ಜಿ.ಪಂ. ಸಿಇಒ ಕೆ.ಎನ್‌.ಗೋವಿಂದರಾಜು ಸನ್ಮಾನಿಸಿ­ದರು. ಡಿಡಿಪಿಐ ಈಶ್ವರಯ್ಯ, ತುಮಕೂರು ಕ್ಷೇತ್ರ ಶಿಕ್ಷಣಾಧಿಕಾರಿ ಕುಮುದಮ್ಮ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.