ADVERTISEMENT

‘ಮಾಹಿತಿ ಕ್ರೋಡೀಕರಿಸಿ’

ವಿವಿಧ ಇಲಾಖೆ ಅಧಿಕಾರಿಗಳ ಸಭೆ­

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2013, 7:12 IST
Last Updated 5 ಡಿಸೆಂಬರ್ 2013, 7:12 IST

ಚಿಕ್ಕನಾಯಕನಹಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.15ಕ್ಕೆ ತುಮಕೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಎಲ್ಲ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಹಿರಿಯ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ಒದಗಿಸಬೇಕು ಎಂದು ತಹಶೀಲ್ದಾರ್ ಕಾಮಾಕ್ಷಮ್ಮ ಸೂಚಿಸಿದರು.

ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬುಧವಾರ ನಡೆದ ವಿವಿಧ ಇಲಾಖೆ ಅಧಿಕಾರಿಗಳ ಸಭೆ­ಯಲ್ಲಿ ಮಾತನಾಡಿ,  ಸಾರ್ವಜನಿಕರು ಸಲ್ಲಿಸಿದ ಅಹವಾಲು­ಗಳನ್ನು ಇತ್ಯರ್ಥಪಡಿಸದಿದ್ದರೆ ಸಂಬಂಧಿ­ಸಿದ ಅಧಿಕಾರಿಗಳೇ ಹೊಣೆ ಹೊರಬೇಕಾ­ಗುತ್ತದೆ ಎಂದು ಎಚ್ಚರಿಸಿದರು.

ಬರ ಪರಿಹಾರ ಕಾಮಗಾರಿ, ಕುಡಿಯುವ ನೀರು ಪೂರೈಕೆ, ಮೇವಿನ ಸಮಸ್ಯೆ, ಗಂಗಾ ಕಲ್ಯಾಣ ಯೋಜನೆ ಅನುಷ್ಠಾನ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಬೇಕು ಎಂದು ಹೇಳಿದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎಚ್.ಕೃಷ್ಣಾನಾಯ್ಕ, ಶಿರಸ್ತೇದಾರ್‌ ದೊಡ್ಡಮಾರಯ್ಯ, ಪುರಸಭೆ ಮುಖ್ಯಾ­ಧಿಕಾರಿ ವೆಂಕಟೇಶಶೆಟ್ಟಿ, ಸಿಡಿಪಿಒ ಅನಿಸ್ ಖೈಸರ್, ಕ್ಷೇತ್ರ ಶಿಕ್ಷಣಾಧಿಕಾರಿ ಸಾ.ಚಿ.ನಾಗೇಶ್, ಜಿ.ಪಂ. ಕಾರ್ಯ­ನಿರ್ವಾಹಕ ಎಂಜಿನಿ­ಯರ್ ಚಿಕ್ಕ­ದಾಸಪ್ಪ  ಉಪಸ್ಥಿತ­ರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.