ಹಣ
ತುಮಕೂರು: ತಾಲ್ಲೂಕಿನ ಮಲ್ಲಸಂದ್ರ ಚೆಕ್‌ಪೋಸ್ಟ್ ಬಳಿ ಸೋಮವಾರ ರಾತ್ರಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.28 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಪಡೆದಿದ್ದಾರೆ.
ನಗರದ ನಿವಾಸಿ ಕೇತರಾಮ ಎಂಬುವರು ಕಾರಿನಲ್ಲಿ ಹಣ ತೆಗೆದುಕೊಂಡು ಹೋಗುತ್ತಿದ್ದರು. ಹಣಕ್ಕೆ ಯಾವುದೇ ದಾಖಲೆ ಇರಲಿಲ್ಲ. ಪೊಲೀಸರು ವಾಹನ ತಪಾಸಣೆ ನಡೆಸುವಾಗ ಹಣ ಪತ್ತೆಯಾಗಿದೆ. ಅಧಿಕಾರಿಗಳು ಹಣ ಜಪ್ತಿ ಮಾಡಿದ್ದು, ಜಿಲ್ಲಾ ಖಜಾನೆಗೆ ಒಪ್ಪಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.