ADVERTISEMENT

ಫೆ.27ರಂದು ತುಮಕೂರು ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2019, 10:02 IST
Last Updated 25 ಫೆಬ್ರುವರಿ 2019, 10:02 IST

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ 12ನೇ ಘಟಿಕೋತ್ಸವ ಫೆಬ್ರುವರಿ 27ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಕುಲಪತಿ ಪ್ರೊ.ವೈ.ಎಸ್. ಸಿದ್ಧೇಗೌಡ ಘಟಿಕೋತ್ಸವ ಕುರಿತು ಮಾಹಿತಿ ನೀಡಿದರು.

ವಿವಿಯ ಡಾ.ಶಿವಕುಮಾರ ಸ್ವಾಮೀಜಿ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಉಪಸ್ಥಿತರಿರುವರು. ಭಾರತೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಪ್ರೊ.ಅನುರಾಗ್‌ಕುಮಾರ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದರು.

ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 68 ವಿದ್ಯಾರ್ಥಿಗಳಿಗೆ 89 ಚಿನ್ನದ ಪದಗಳನ್ನು ಹಾಗೂ ಮೂರು ನಗದು ಬಹುಮಾನಗಳನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಹೇಳಿದರು.

ADVERTISEMENT

ಈ ಹಿಂದಿನ ಘಟಿಕೋತ್ಸವಗಳಲ್ಲಿ ಐದಾರು ಅಭ್ಯರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗುತ್ತಿತ್ತು. ಈ ವರ್ಷ 67 ಅಭ್ಯರ್ಥಿಗಳಿಗೆ ಪಿಎಚ್‌.ಡಿ ಪದವಿ ಪ್ರದಾನ ಮಾಡಲಾಗುತ್ತಿದೆ ಇದು ಈ ಬಾರಿಯ ವಿಶೇಷವಾಗಿದೆ ಎಂದು ತಿಳಿಸಿದರು.

ಒಬ್ಬ ಅಭ್ಯರ್ಥಿಗೆ ಡಿ.ಲಿಟ್ ಪದವಿ, 67 ಅಭ್ಯರ್ಥಿಗಳು ಪಿಎಚ್.ಡಿ ಪದವಿ, 1748 ಅಭ್ಯರ್ಥಿಗಳು ಸ್ನಾತಕೋತ್ತರ ಹಾಗೂ 7626 ಅಭ್ಯರ್ಥಿಗಳು ಸ್ನಾತಕ ಪದವಿ ಪಡೆಯಲಿದ್ದು, ಒಟ್ಟು 9442 ಅಭ್ಯರ್ಥಿಗಳಿಗೆ ಪದವಿ ಪ್ರದಾನ ನಡೆಯಲಿದೆ ಎಂದು ವಿವರಿಸಿದರು.

ಎಂಎಸ್ಸಿ ಬಯೋಟೆಕ್ನಾಲಜಿಗೆ 2, ಎಂಎಸ್ಸಿ ಸಂವಹನ ವಿಭಾಗಕ್ಕೆ 3 ರ‍್ಯಾಂಕ್ ಹೊರತುಪಡಿಸಿ ಎಲ್ಲ ಸ್ನಾತಕೋತ್ತರ ಪದವಿಗಳಿಗೆ ತಲಾ ಐದು ರ್‍ಯಾಂಕುಗಳನ್ನು ನೀಡಲಾಗಿದೆ ಎಂದು ಹೇಳಿದರು.

ಕುಲಸಚಿವ ಪ್ರೊ.ಕೆ.ಎನ್.ಗಂಗಾನಾಯ್ಕ, ಮೌಲ್ಯಮಾಪನ ವಿಭಾಗದ ಕುಲಸಚಿವ ಪ್ರೊ.ಕೆ.ಜೆ.ಸುರೇಶ್ ಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.