ADVERTISEMENT

ವಿಚ್ಚೇದನಕ್ಕೆ ಬಂದು ಒಂದಾದ 14 ದಂಪತಿಗಳು

ಲೋಕ ಅದಾಲತ್‌ನಲ್ಲಿ ಒಂದಾದ 14 ದಂಪತಿಗಳು

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2023, 15:52 IST
Last Updated 11 ಫೆಬ್ರುವರಿ 2023, 15:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ತುಮಕೂರು: ಜಿಲ್ಲೆಯಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 14 ದಂಪತಿಗಳು ಪುನಃ ಒಂದಾಗಿದ್ದಾರೆ.

ಜಿಲ್ಲಾ ಕೌಟುಂಬಿಕ ನ್ಯಾಯಾಲಯ, ಪಾವಗಡ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಪ್ರಕರಣಗಳಲ್ಲಿ ನ್ಯಾಯಾಧೀಶರು ದಂಪತಿಗಳಿಗೆ ಬುದ್ಧಿ ಹೇಳಿ, ಅವರ ಮನವೊಲಿಸಿದ ಪರಿಣಾಮ ದಂಪತಿಗಳು ಒಂದಾದರು. ಇದಕ್ಕೆ ವಕೀಲರು, ಕಕ್ಷಿದಾರರು, ಸಾರ್ವಜನಿಕರು ಸಾಕ್ಷಿಯಾದರು.

ಜಿಲ್ಲಾ ಕೌಟುಂಬಿಕ ನ್ಯಾಯಾಲಯದಲ್ಲಿ 7 ದಂಪತಿಗಳು, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ 7 ದಂಪತಿಗಳು ಪರಸ್ಪರ ಹಾರ ಬದಲಾಯಿಸಿಕೊಂಡು, ಸಿಹಿ ಹಂಚಿ ಒಗ್ಗೂಡಿದರು.

ADVERTISEMENT

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾ, ‘ದಂಪತಿಗಳು ಸಣ್ಣ–ಪುಟ್ಟ ವಿಚಾರಗಳಿಗೆ ಮನಸ್ಸು ಕೆಡಿಸಿಕೊಂಡು, ವಿಚ್ಛೇದನಕ್ಕೆ ಮುಂದಾಗುತ್ತಾರೆ. ನ್ಯಾಯಾಧೀಶರು, ಎರಡೂ ಕಡೆಯ ವಕೀಲರು ಬುದ್ಧಿ ಹೇಳಿದ್ದಾರೆ. ನ್ಯಾಯಾಲಯದಲ್ಲಿಯೇ ಹಾರ ಬದಲಿಸಿಕೊಂಡು, ಸಿಹಿ ತಿನಿಸಿ ಮನೆಗೆ ತೆರಳಿದ್ದಾರೆ’ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶರಾದ ನೂರುನ್ನೀಸಾ, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಎನ್.ಮುನಿರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.