ತುಮಕೂರು: ಗುಬ್ಬಿ ಪಟ್ಟಣದ ರೈಲು ನಿಲ್ದಾಣದಲ್ಲಿ ಲಘು ಮೇಲ್ಸೇತುವೆ ನಿರ್ಮಾಣಕ್ಕೆ ರೈಲ್ವೆ ಮಂಡಳಿ ಅನುಮತಿ ನೀಡಿದ್ದು, ₹19.35 ಕೋಟಿ ಮಂಜೂರು ಮಾಡಿದೆ.
ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಗುಬ್ಬಿ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳ ಜತೆ ಚರ್ಚಿಸಿದ್ದರು. ಅಧಿಕಾರಿಗಳು ಮೇಲ್ಸೇತುವೆ ಅಗತ್ಯದ ಕುರಿತು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದರು. ಇದೀಗ ಮೇಲ್ಸೇತುವೆ ನಿರ್ಮಾಣಕ್ಕೆ ರೈಲ್ವೆ ಮಂಡಳಿ ಮಂಜೂರಾತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.