ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿಯ ಕಲ್ಲೂರು ಕೆರೆಯಲ್ಲಿ ಶನಿವಾರ ರಾತ್ರಿ ಇಬ್ಬರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಕಲ್ಲೂರಿನ ಹನುಮಂತಯ್ಯ (40) ನಟರಾಜು (32) ನೀರಲ್ಲಿ ಕೊಚ್ಚಿ ಹೋದವರು. ಕಳೆದ ರಾತ್ರಿ ಸುಮಾರು 7.30 ರ ಸಮಯದಲ್ಲಿ ತೋಟದಿಂದ ಬರುವಾಗ ಹನುಮಂತಯ್ಯ ಕೋಡಿಯ ನೀರಿನಲ್ಲಿ ಕೈಕಾಲು ತೊಳೆಯಲು ಹೋಗಿ ಚಾರಿ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋದ ನಟರಾಜು ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ತಹಶೀಲ್ದಾರ್ ಬಿ.ಆರತಿ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.