ತುಮಕೂರು: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪೂರ್ಣಗೊಂಡಿದ್ದು, ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 23,05,502 ಲಕ್ಷ ಮತದಾರರಿದ್ದಾರೆ. ಇದರಲ್ಲಿ 11,40,384 ಪುರುಷರು, 11,65,030 ಮಹಿಳೆಯರು ಹಾಗೂ 88 ಇತರರು ಇದ್ದಾರೆ. ceo.karnataka.gov.in / tumkur.nic.in ವೆಬ್‌ಸೈಟ್, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಚೇರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಕಚೇರಿಯಲ್ಲಿ ಪಟ್ಟಿ ಪ್ರಕಟಿಸಲಾಗಿದೆ.
‘ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದ ಅವಧಿಯಲ್ಲಿ ಒಟ್ಟು 37,067 ಅರ್ಜಿ ಸ್ವೀಕೃತವಾಗಿದ್ದವು. ನಿಯಮಾನುಸಾರ ಎಲ್ಲ ವಿಲೇವಾರಿ ಮಾಡಲಾಗಿದೆ. ಚುನಾವಣಾ ಆಯೋಗವು ಜ.1, ಏ.1, ಜುಲೈ 1 ಹಾಗೂ ಅ.1ನ್ನು ಅರ್ಹತಾ ದಿನಾಂಕವೆಂದು ಪರಿಗಣಿಸಿದೆ. ಪರಿಷ್ಕೃತ ದಿನಾಂಕಕ್ಕೆ 18 ವರ್ಷ ತುಂಬಿದವರು ಮತದಾರರ ಪಟ್ಟಿ ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು’ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಸಭೆಯಲ್ಲಿ ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.