ತಿಪಟೂರು: ಮಕ್ಕಳಿಗೆ ಏನಾದರೂ ಹೇಳಬೇಕಾದರೆ ಧೈರ್ಯವಾಗಿ, ನಿಖರವಾಗಿ ಅರ್ಥವಾಗುವ ರೀತಿಯಲ್ಲಿ ಸತ್ಯವನ್ನು ಹೇಳಬೇಕು ಎಂದು ತುರುವೇಕೆರೆ ತಾಲ್ಲೂಕಿನ ಮಾದಿಹಳ್ಳಿಯ ಬದರಿಕಾಶ್ರಮದ ರಾಮಕೃಷ್ಣ ಮಠದ ಅಧ್ಯಕ್ಷ ಮಂಗಳನಾಥಾನಂದ ಮಹಾರಾಜ್ ಹೇಳಿದರು.
ಕಲ್ಪತರು ವಿದ್ಯಾ ಸಂಸ್ಥೆಯ ಕಲ್ಪತರು ಸೆಂಟ್ರಲ್ ಸ್ಕೂಲ್ ವತಿಯಿಂದ ಕಲ್ಪ ವೈಭವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಸಕ ಕೆ.ಷಡಕ್ಷರಿ ಮಾತನಾಡಿ, ‘ಸಂಸ್ಥೆಯ ಪರವಾಗಿ ಸರ್ಕಾರಕ್ಕೆ ಮನವಿ ಮಾಡಿದ್ದು ಮೆಡಿಕಲ್ ಕಾಲೇಜಿನ ಅವಶ್ಯಕತೆಯಿದೆ ಎಂದು ತಿಳಿಸಲಾಗಿದೆ. ಕಿಬ್ಬನಹಳ್ಳಿಯ ಬಳಿ ಸೂಪರ್ ಸ್ಪೆಷಾಲಿಸ್ಟ್ ಆಸ್ವತ್ರೆ ತೆರಯಲಾಗುತ್ತಿದೆ’ ಎಂದರು.
ಶಾಲೆಯನ್ನು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ ಮಕ್ಕಳಿಗೆ ಪಾರಿತೋಷಕ ಹಾಗೂ ನೆನಪಿನ ಕಾಣಿಕೆ ನೀಡಲಾಯಿತು.
ಸಂಸ್ಥೆ ಅಧ್ಯಕ್ಷ ಪಿ.ಕೆ. ತಿಪ್ಪೇರುದ್ರಪ್ಪ, ಉಪವಿಭಾಗಾಧಿಕಾರಿ ಸಪ್ತಶ್ರೀ.ಬಿ.ಕೆ, ತಹಶೀಲ್ದಾರ್ ಪವನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ, ಬಿ.ಎಸ್.ಉಮೇಶ್, ನಟರಾಜು, ಟಿ.ಎಸ್.ಬಸವರಾಜು, ಜಿ.ಪಿ.ದೀಪಕ್, ಟಿ.ಎಸ್.ಶಿವಪ್ರಸಾದ್, ಎಂ.ಆರ್.ಸಂಗಮೇಶ್, ಟಿ.ಯು.ಜಗದೀಶಮೂರ್ತಿ, ಜಿ.ಎಸ್.ಉಮಾಶಂಕರ್, ದೇವಿಕಾ ಬಿ ಸ್ವಾಮಿ, ಶ್ರೀನಿವಾಸ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.