ತುರುವೇಕೆರೆ: ರಾಜ್ಯದ ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ರಾಜ್ಯ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸುಳಿವು ನೀಡಿದರು.
ಪಟ್ಟಣದಲ್ಲಿ ಸೋಮವಾರ ಮಾತನಾಡಿದ ಅವರು, ಗ್ರಾಮ ಪಂಚಾಯಿಗಳಂತೆ ಸಹಕಾರ ಕ್ಷೇತ್ರದಲ್ಲೂ ಮೀಸಲಾತಿ ತಂದರೆ ಪ್ರತಿಯೊಬ್ಬರಿಗೂ ಅನುಕೂಲವಾಗಲಿದೆ ಎಂದರು.
ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಸರ್ಕಾರ ಗ್ರಾಮ ಪಂಚಾಯಿತಿಗೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತೆರೆಯಲು ಚಿಂತನೆ ನಡೆಸಿದ್ದು ಶೀಘ್ರ ಜಾರಿಗೆ ಬರಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.