ADVERTISEMENT

263 ಮಂದಿ ಹೋಂ ಕ್ವಾರಂಟೈನ್‍

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2020, 16:54 IST
Last Updated 5 ಏಪ್ರಿಲ್ 2020, 16:54 IST

ತುಮಕೂರು: ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 263 ಮಂದಿಯನ್ನು ಹೋಂ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಆರ್.ಚಂದ್ರಿಕಾ ತಿಳಿಸಿದ್ದಾರೆ.

108 ಮಂದಿಯನ್ನು ಐಸೊಲೇಷನ್‍ನಲ್ಲಿ ಇಡಲಾಗಿದೆ. 107 ಜನರ 28 ದಿನಗಳ ಹೋಂ ಕ್ವಾರೆಂಟೈನ್ ಅವಧಿ ಪೂರ್ಣಗೊಂಡಿದೆ. ಈವರೆವಿಗೂ 156 ಜನರ ಗಂಟಲುಸ್ರಾವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅವರಲ್ಲಿ 151 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ. 2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಈಗಾಗಲೇ ಒಬ್ಬರು ಮೃತಪಟ್ಟಿದ್ದಾರೆ. 3 ಮಾದರಿಗಳು ತಿರಸ್ಕೃತವಾಗಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT