ADVERTISEMENT

ಕುಣಿಗಲ್ | 'ಪೌರಕಾರ್ಮಿಕರಿಗೆ ನಿವೇಶನ: 3 ಎಕರೆ ಜಮೀನು ಗುರುತು'

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2025, 7:10 IST
Last Updated 24 ಸೆಪ್ಟೆಂಬರ್ 2025, 7:10 IST
ಕುಣಿಗಲ್ ಪುರಸಭೆಯಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಪೌರಕಾರ್ಮಿಕರನ್ನು ಸತ್ಕರಿಸಲಾಯಿತು
ಕುಣಿಗಲ್ ಪುರಸಭೆಯಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಪೌರಕಾರ್ಮಿಕರನ್ನು ಸತ್ಕರಿಸಲಾಯಿತು   

ಕುಣಿಗಲ್: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ನಾಗರಿಕರು ಗೌರವಿಸಬೇಕು. ಅಂತೆಯೇ ಪೌರಕಾರ್ಮಿಕರು ಪೌರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕಿದೆ ಎಂದು ಶಾಸಕ ರಂಗನಾಥ್ ತಿಳಿಸಿದರು.

ಪುರಸಭೆಯಲ್ಲಿ ಮಂಗಳವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದರು.

ಪೌರಕಾರ್ಮಿಕರಿಗೆ ನಿವೇಶನ ನೀಡಲು ಮೂರು ಎಕರೆ ಜಮೀನು ಗುರುತಿಸಲಾಗಿದ್ದು, ರಸ್ತೆ ಸಮಸ್ಯೆ ಬಗೆಹರಿಯದ ಕಾರಣ ವಿತರಣೆ ತಡವಾಗಿದ್ದು, ಸಮಸ್ಯೆ ಬಗೆಹರಿಸಲು ತಹಶೀಲ್ದಾರ್ ಅರವರಿಗೆ ಸೂಚನೆ ನೀಡಲಾಗಿದೆ. ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸಿ ನಿವೇಶನ ಹಂಚಿಕೆ ಕ್ರಮ ಕೈಗೊಳ್ಳಲಾಗುವುದು. ಎಲ್ಲೆಂದರಲ್ಲಿ ಕಸ ಸುರಿಯುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ಜಾಗೃತಿ ಮೂಡಿಸಬೇಕಿದೆ, ದುಶ್ಚಟಗಳಿಂದ ದೂರವಿದ್ದು,, ಕೀಳಿರಿಮೆ ಬಿಟ್ಟು ಕರ್ತವ್ಯ ನಿರ್ವಹಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಲು ಸಲಹೆ ನೀಡಿದರು.

ADVERTISEMENT

ಆರೋಗ್ಯದ ದೃಷ್ಟಿಯಿಂದ ವಾರಕ್ಕೊಮೆ ಉಪವಾಸ ಮಾಡಿ, ದುಶ್ಚಟಗಳಿಂದ ದೂರವಿರಿ. ಪ್ರತಿವರ್ಷ ಉತ್ತಮ ಪೌರ ಕಾರ್ಮಿಕರಿಗೆ ₹25 ಸಾವಿರ ಬಹುಮಾನ ಘೋಷಣೆ ಮಾಡಿದರು.

ಪುರಸಭೆ ಅಧ್ಯಕ್ಷೆ ಮಂಜುಳಾ ನಾಗರಾಜು, ಸ್ಥಾಯಿ ಸಮಿತಿ ಅಧ್ಯಕ್ಷೆ ಆಸ್ಮಾ, ಪುರಸಭೆ ಸದಸ್ಯರು, ಮುಖ್ಯಾಧಿಕಾರಿ ಕೃಷ್ಣ ಹಾಜರಿದ್ದರು.

1994ರಿಂದ ಕೆಲ ಪೌರಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ಕಾಯಂ ಮಾಡಿ ವೇತನ ತಾರತಮ್ಯ ನಿವಾರಿಸಿ

- ರಂಗಸ್ವಾಮಿ ಪುರಸಭೆ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.