ADVERTISEMENT

ತುಮಕೂರು: ರೆಮ್‌ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಪತ್ತೆ

​ಪ್ರಜಾವಾಣಿ ವಾರ್ತೆ
Published 3 ಮೇ 2021, 8:45 IST
Last Updated 3 ಮೇ 2021, 8:45 IST
   

ತುಮಕೂರು: ಕೋವಿಡ್–19 ಚಿಕಿತ್ಸೆಗೆ ಬಳಸುವ ರೆಮ್‌ಡಿಸಿವಿರ್ ಚುಚ್ಚುಮದ್ದನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ನಗರದ ಸಿದ್ಧಗಂಗಾ ಆಸ್ಪತ್ರೆಯ ಇಬ್ಬರು ನೌಕರರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸಿದ್ಧಗಂಗಾ ಆಸ್ಪತ್ರೆ ಮಾರುಕಟ್ಟೆ ವಿಭಾಗದಲ್ಲಿ ಕೆಲಸ ಮಾಡುವ ಸೈಯ್ಯದ್ ಹರ್ಷದ್, ಇದೇ ಆಸ್ಪತ್ರೆಯಲ್ಲಿ ಸಿಟಿ ಎಕ್ಸರೇ ವಿಭಾಗದಲ್ಲಿ ಕೆಲಸ ಮಾಡುವ ರಖೀಬ್ ಹಾಗೂ ಸೂರ್ಯ ಆಸ್ಪತ್ರೆಯ ಟೆಕ್ನಿಷಿಯನ್ ರಂಗನಾಥ ಬಂಧಿತ ಆರೋಪಿಗಳು.

ನಗರದ ಗುಂಚಿ ವೃತ್ತದಲ್ಲಿ ಚುಚ್ಚುಮದ್ದು ಮಾರಾಟ ಮಾಡುವ ಸಮಯದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. 100 ಎಂ.ಜಿ.ಯ ಮೂರು ರೆಮ್‌ಡಿಸಿವಿರ್ ಚುಚ್ಚುಮದ್ದು ವಶಪಡಿಸಿಕೊಂಡಿದ್ದಾರೆ. ₹4,700 ಬೆಲೆ ಬಾಳುವ ಚುಚ್ಚುಮದ್ದನ್ನು ₹17 ಸಾವಿರಕ್ಕೆ ಮಾರಾಟ ಮಾಡುತ್ತಿದ್ದು, ತನಿಖೆ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ.

ADVERTISEMENT

ರೆಮ್‌ಡಿಸಿವಿರ್ ಚುಚ್ಚುಮದ್ದನ್ನು ಕಾಳಸಂತೆಯಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂಬ ಆರೋಪಗಳು ಜಿಲ್ಲೆಯಲ್ಲಿ ವ್ಯಾಪಕವಾಗಿ ಕೇಳಿ ಬಂದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.