ADVERTISEMENT

ಪಾವಗಡದಲ್ಲಿ ಮತ್ತೆ 3 ಸಾವಿರ ಮೆ.ವಾ ವಿದ್ಯುತ್ ಉತ್ಪಾದನೆ

ಸೋಲಾರ್ ಪಾರ್ಕ್ ವಿಸ್ತರಣೆ ಸರ್ಕಾರ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2023, 15:33 IST
Last Updated 29 ಆಗಸ್ಟ್ 2023, 15:33 IST
ಬೆಂಗಳೂರಿನಲ್ಲಿ ಕ್ರೆಡಾಲ್ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ, ಕೆಎಸ್‌ಪಿಡಿಸಿಎಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮರ್‌ನಾಥ್ ಅವರನ್ನು ಭೇಟಿಮಾಡಿದ ಪಾವಗಡ ತಾಲ್ಲೂಕು ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಪಿ.ಸಾಂಬಸದಾಶಿವರೆಡ್ಡಿ ಇತರರು ಇದ್ದಾರೆ
ಬೆಂಗಳೂರಿನಲ್ಲಿ ಕ್ರೆಡಾಲ್ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ, ಕೆಎಸ್‌ಪಿಡಿಸಿಎಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮರ್‌ನಾಥ್ ಅವರನ್ನು ಭೇಟಿಮಾಡಿದ ಪಾವಗಡ ತಾಲ್ಲೂಕು ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಪಿ.ಸಾಂಬಸದಾಶಿವರೆಡ್ಡಿ ಇತರರು ಇದ್ದಾರೆ   

ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ಸೋಲಾರ್ ಪಾರ್ಕ್ ವಿಸ್ತರಿಸಿ ಹೆಚ್ಚುವರಿಯಾಗಿ 3 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಲು ಇಂಧನ ಇಲಾಖೆ ಒಪ್ಪಿಗೆ ಸೂಚಿಸಿದೆ.

ಪಾವಗಡ ತಾಲ್ಲೂಕು ರಾಪ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2,500 ಮೆಗಾವಾಟ್ ಹಾಗೂ ಇಂಟೂರಾಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 500 ಮೆಗಾವಾಟ್ ಸೇರಿದಂತೆ ಒಟ್ಟು 3 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆಗೆ ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮ ಮುಂದಾಗಿದೆ. ಈಗಾಗಲೇ ಸ್ಥಾಪಿಸಿರುವ ಸೋಲಾರ್ ಪಾರ್ಕ್‌ನಿಂದ 2 ಸಾವಿರ ಮೆ.ವಾ ವಿದ್ಯುತ್ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದು, ಹೊಸ ಯೋಜನೆ ಕಾರ್ಯಗತಗೊಂಡರೆ ಸುಮಾರು 5 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ.

ರಾಪ್ಟೆ, ಇಂಟೂರಾಯನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಪ್ರದೇಶದಲ್ಲಿ ರೈತರ ಜಮೀನನ್ನು ಗುತ್ತಿಗೆ ಆಧಾರದಲ್ಲಿ ಪಡೆದುಕೊಳ್ಳಲು ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮ ಪ್ರಕಟಣೆ ಹೊರಡಿಸಿದೆ. ಭೂಮಿ ಬಿಟ್ಟುಕೊಡುವ ಬಗ್ಗೆ ರೈತರು ಒಪ್ಪಿಗೆ ಪತ್ರಗಳನ್ನು ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

ADVERTISEMENT

ರಾಪ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹುಸೇನ್‌ಪುರ, ರೆಡ್ಡಿವಾರಹಳ್ಳಿ, ನಾಗೇನಹಳ್ಳಿ, ಅಪ್ಪಾಜಿಹಳ್ಳಿ, ಬುಗುಡೂರು, ಪಕ್ಕದ ಅನ್ನದಾನಪುರ ಹಾಗೂ ಇಂಟೂರಾಯನಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆ ಆರಂಭವಾಗಲಿದೆ.

ಈ ಯೋಜನೆಗೆ ಒಪ್ಪಿಗೆ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಪಿ.ಸಾಂಬಸದಾಶಿವರೆಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.

ಸೋಲಾರ್ ಪಾರ್ಕ್ ವಿಸ್ತರಣೆ ಮಾಡುವಂತೆ ಕೋರಿ ಸರ್ಕಾರ, ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮಕ್ಕೆ ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮನವಿ ಸಲ್ಲಿಸಲಾಗಿತ್ತು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕ್ರೆಡಾಲ್ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ, ಕೆಎಸ್‌ಪಿಡಿಸಿಎಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮರ್‌ನಾಥ್ ಅವರನ್ನು ಭೇಟಿಮಾಡಿ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.