ADVERTISEMENT

ತುಮಕೂರು: ಬೋನಿಗೆ ಬಿದ್ದ ಸುಮಾರು ಮೂರು ವರ್ಷದ ಹೆಣ್ಣು ಚಿರತೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2022, 4:46 IST
Last Updated 20 ಮಾರ್ಚ್ 2022, 4:46 IST
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಚಿಕ್ಕ ಕಟ್ಟಿಗೆನಹಳ್ಳಿಯಲ್ಲಿ ಶನಿವಾರ ರಾತ್ರಿ ಚಿರತೆಯೊಂದು ಬೋನಿಗೆ ಬಿದ್ದಿದೆ‌.
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಚಿಕ್ಕ ಕಟ್ಟಿಗೆನಹಳ್ಳಿಯಲ್ಲಿ ಶನಿವಾರ ರಾತ್ರಿ ಚಿರತೆಯೊಂದು ಬೋನಿಗೆ ಬಿದ್ದಿದೆ‌.   

ತುಮಕೂರು: ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿಯ ಚಿಕ್ಕ ಕಟ್ಟಿಗೆನಹಳ್ಳಿಯಲ್ಲಿ ಸುಮಾರು ಮೂರು ವರ್ಷದ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ರಾತ್ರಿ ಸೆರೆ ಹಿಡಿದಿದ್ದಾರೆ.

ಸೇತುವೆ ಕೊಳಾಯಿ ಒಳಗಡೆ ಅಡಗಿದ್ದ ಚಿರತೆಯನ್ನು ಅಗ್ನಿಶಾಮಕ ಸಿಬ್ಬಂದಿಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸೆರೆ ಸಿಕ್ಕ ಚಿರತೆಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಸಾಗಿಸುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದರು. ಚಿರತೆಯನ್ನು ಸೆರೆ ಹಿಡಿದಿದ್ದರಿಂದ ಗ್ರಾಮದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.