ADVERTISEMENT

ತುಮಕೂರು | 'ಧರ್ಮಸ್ಥಳ ಸಂಘಕ್ಕೆ ₹4,500 ಕೋಟಿ ಸಾಲ'

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2024, 5:21 IST
Last Updated 25 ಸೆಪ್ಟೆಂಬರ್ 2024, 5:21 IST
<div class="paragraphs"><p>ತುಮಕೂರಿನಲ್ಲಿ ಮಂಗಳವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನಿಂದ ತಾಲ್ಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.</p></div>

ತುಮಕೂರಿನಲ್ಲಿ ಮಂಗಳವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನಿಂದ ತಾಲ್ಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

   

ತುಮಕೂರು: ಜಿಲ್ಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್‌ಗೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ₹4,500 ಕೋಟಿ ಸಾಲ ನೀಡಿದ್ದು, ಮಹಿಳೆಯರು ಸ್ವಯಂ ಉದ್ಯೋಗ ಕಂಡುಕೊಳ್ಳಲು ನೆರವಾಗಿದೆ ಎಂದು ಎಸ್‌ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕೇಂದ್ರದ ನಿರ್ದೇಶಕ ಕೆ.ಎನ್.ವಾದಿರಾಜ ಹೇಳಿದರು.

ನಗರದಲ್ಲಿ ಮಂಗಳವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ADVERTISEMENT

ಧರ್ಮಸ್ಥಳ ಸಂಘವು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ₹1 ಲಕ್ಷದಿಂದ ₹5 ಲಕ್ಷದ ವರೆಗೆ ಸಾಲ ನೀಡುತ್ತಿದೆ. ಎಸ್‌ಬಿಐ ಸಂಘದ ಮೂಲಕ ಮಹಿಳೆಯರಿಗೆ ಸಾವಿರಾರು ಕೋಟಿ ಸಾಲ ವಿತರಿಸಿದೆ. ಕೊಟ್ಟ ಸಾಲ ಶೇ 100ರಷ್ಟು ಮರು ಪಾವತಿಯಾಗಿದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಶೀನಪ್ಪ, ‘ರಾಜ್ಯದಲ್ಲಿ 50 ಲಕ್ಷ ಮಹಿಳೆಯರು ಸಂಘದ ಸದಸ್ಯತ್ವ ಪಡೆದಿದ್ದಾರೆ. 1 ಲಕ್ಷ ವಿದ್ಯಾರ್ಥಿಗಳು ಶಿಷ್ಯವೇತನ ಪಡೆದು ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆ. ರಾಜ್ಯದಲ್ಲಿ 10 ರಾಷ್ಟ್ರೀಕೃತ ಬ್ಯಾಂಕ್‌ಗಳ ಮೂಲಕ ₹24 ಸಾವಿರ ಕೋಟಿ ಸಾಲ ವಿತರಿಸಲಾಗಿದೆ’ ಎಂದು ಮಾಹಿತಿ ಹಂಚಿಕೊಂಡರು.

ಜಿಲ್ಲಾ ನಿರ್ದೇಶಕ ಸತೀಶ್‌ ಸುವರ್ಣ, ತಾಲ್ಲೂಕು ಯೋಜನಾಧಿಕಾರಿ ಪಿ.ಬಿ.ಸಂದೇಶ್‌ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.