ಶಿರಾ: ನಗರಸಭೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರು ಹೆಚ್ಚು ವಾಸ ಮಾಡುವ ವಾರ್ಡ್‌ಗಳ ಅಭಿವೃದ್ಧಿಗಾಗಿ ಅಲ್ಪಸಂಖ್ಯಾತರ ಇಲಾಖೆಯಿಂದ ₹5 ಕೋಟಿ ಮಂಜೂರಾಗಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ನಗರಸಭೆ ವ್ಯಾಪ್ತಿಯ 10 ಮತ್ತು 24ನೇ ವಾರ್ಡ್‌ನಲ್ಲಿ ಬುಧವಾರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಅಲ್ಪಸಂಖ್ಯಾತರು ವಾಸವಾಗಿರುವ ವಾರ್ಡ್‌ಗಳಲ್ಲಿ ಮಸೀದಿ, ಚರಂಡಿ, ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅವಕಾಶಗಳಿಂದ ವಂಚಿತರಾದವರಿಗೆ ಸೌಲಭ್ಯ ಒದಗಿಸಲಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸಚಿವ ಜಮೀರ್ ಅಹಮದ್ ಖಾನ್ ಹಣ ಬಿಡುಗಡೆ ಮಾಡಿದ್ದಾರೆ ಎಂದರು.
ನಗರಸಭೆ ಪೌರಾಯುಕ್ತ ರುದ್ರೇಶ್, ಅಧ್ಯಕ್ಷ ಜೀಷಾನ್ ಮೊಹಮದ್, ಉಪಾಧ್ಯಕ್ಷ ಲಕ್ಷ್ಮಿಕಾಂತ್, ಸದಸ್ಯರಾದ ಅಜಯಕುಮಾರ್, ಬುರಾನ್ ಮೊಹಮದ್, ಅಮಾನುಲ್ಲಾ ಖಾನ್, ನಸ್ರುಲ್ಲಾ ಖಾನ್, ಫಯಾಜ್, ರಫಿ, ಮಜರ್ ಉಲ್ಲಾ ಖಾನ್, ಫರ್ಮಾನ್, ನೂರುದ್ದೀನ್, ಶಶಿಧರ ಗೌಡ, ವಾಜರಹಳ್ಳಿ ರಮೇಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.